ಪ್ರಶಸ್ತಿಗಳಿಗೆ ಆನ್‌ಲೈನ್ ಮೂಲಕ ಪ್ರಸ್ತಾವನೆಗಳ ಆಹ್ವಾನ

ಮಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮ ವಿಭೂಷಣ, ಪದ್ಮಶ್ರೀ ಪ್ರಶಸ್ತಿ ನೀಡಲು ಆನ್ ಲೈನ್ ಮೂಲಕ ಪ್ರಸ್ತಾವನೆ/ಶಿಫಾರಸುಗಳನ್ನು ಆಹ್ವಾನಿಸಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದ್ದು, 2023ರ ಸೆಪ್ಟಂಬರ್ 15ರೊಳಗೆ ಸಲ್ಲಿಸಬಹುದಾಗಿದೆ.
ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕರಂತಹ ಎಲ್ಲಾ ಕ್ಷೇತ್ರಗಳಲ್ಲಿ, ವಿಭಾಗಗಳಲ್ಲಿ ವಿಶಿಷ್ಟವಾದ ಮತ್ತು ಅಸಾಧಾರಣ ಸಾಧನೆಗಳು, ಸೇವೆ ಮಾಡಿರುವ ಎಲ್ಲಾ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಪದ್ಮ ಪ್ರಶಸ್ತಿಗೆ ಆನ್‌ಲೈನ್ ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್