ವಿವಾಹಿತೆ ನಾಪತ್ತೆ

ಉಡುಪಿ, ಮೇ 18: ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಗರಗದ್ದೆ ನಿವಾಸಿ ಅಕ್ಷತಾ (28) ಎಂಬ ವಿವಾಹಿತೆ ಮಾರ್ಚ್ 21ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ:9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್‌ರೂಂ ದೂ.ಸಂಖ್ಯೆ: 0820-2526444ನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





