ಸಿದ್ದರಾಮಯ್ಯ, ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಬೊಮ್ಮಾಯಿ

ಬೆಂಗಳೂರು: ನೂತನ ಮುಖ್ಯಮಂತ್ರಿ, ಡಿಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ. ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನರು. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಜನರಿಗೆ ನೀಡಿದ ಎಲ್ಲ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ ಈಡೇರಿಸಲಿ. ಯಾವ ರೀತಿ ನಿಭಾಯಿಸುತ್ತಾರೆ ಅಂತಾ ಕಾದು ನೋಡೋಣ'' ಎಂದು ಹೇಳಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ''ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು'' ಎಂದು ತಿಳಿಸಿದ್ದಾರೆ.
ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ @DKShivakumar ರವರಿಗೆ ಹಾರ್ದಿಕ ಅಭಿನಂದನೆಗಳು.
— Basavaraj S Bommai (@BSBommai) May 18, 2023
ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.
Congratulations to Mr. D. K. Shivakumar for being chosen as the Deputy Chief Minister of Karnataka. May you…
ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ಮಾನ್ಯ ಶ್ರೀ @siddaramaiah ನವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಶ್ರೀ @DKShivakumar ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು.
— B.S.Yediyurappa (@BSYBJP) May 18, 2023