ಮಂತ್ರಿಸ್ಥಾನ ಕೇಳುವ ಪರಿಸ್ಥಿತಿ ಬರಲಿಕ್ಕಿಲ್ಲ: ಕೆ ಹೆಚ್ ಮುನಿಯಪ್ಪ

ಬೆಂಗಳೂರು: ನಾನು ಭಾರತ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು.ರಾಜ್ಯ ಮಟ್ಟದಲ್ಲಿ ಮಂತ್ರಿಸ್ಥಾನ ಕೇಳುವ ಅವಶ್ಯಕತೆಯಿಲ್ಲ ಎಂದು ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಆದೇಶದಂತೆ ದೇವನಹಳ್ಳಿಯಲ್ಲಿ ಚುನಾವಣೆಗೆ ನಿಂತಿದ್ದೇನೆ.ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಹೈಕಮಾಂಡ್ ಆದೇಶದಂತೆ ರಾಷ್ಟ್ರದಿಂದ ರಾಜ್ಯದ ಕಡೆ ಬಂದಿದ್ದೇನೆ. ಹೈಕಮಾಂಡ್ ಆದೇಶಕ್ಕೆ ಬದ್ದನಾಗಿದ್ದು, ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ. ರಾಷ್ಟ್ರದಿಂದ ಬಂದ ನನಗೆ ರಾಜ್ಯದಲ್ಲಿ ಮಂತ್ರಿಸ್ಥಾನ ಕೇಳುವ ಪರಿಸ್ಥಿತಿ ಬರಲಿಕ್ಕಿಲ್ಲ. ಮಿಕ್ಕಿದ್ದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ಮುನಿಯಪ್ಪ ಹೇಳಿದ್ದಾರೆ.
Next Story





