ದೆಹಲಿ ತಲುಪಿದ ಸಿದ್ದರಾಮಯ್ಯ, ಡಿಕೆಶಿ; ಸಂಪುಟ ರಚನೆ ಬಗ್ಗೆ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಅಭೂತಪೂರ್ವ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್‌ನಲ್ಲಿ ಈಗ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಸಚಿವ ಆಕಾಂಕ್ಷಿಗಳ ಪಟ್ಟಿ ಹಿಡಿದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ಸಂಪುಟ ರಚನೆ ಬಗ್ಗೆ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಇಂದು ಸಂಜೆಯೇ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಹಲವು ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
#WATCH | Delhi: Karnataka CM-designate Siddaramaiah arrives at the residence of party general secretary KC Venugopal. pic.twitter.com/YwoWhMrNpt
— ANI (@ANI) May 19, 2023
Next Story