ನಾಳೆ (ಮೇ 20) ಸಿದ್ದರಾಮಯ್ಯ, ಡಿಕೆಶಿ ಪದಗ್ರಹಣ: ಯಾರಿಗೆಲ್ಲ ಆಹ್ವಾನ?

ಬೆಂಗಳೂರು, ಮೇ 19: ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷವು ದೇಶದ 20 ಮಂದಿ ಗಣ್ಯರಿಗೆ ಆಹ್ವಾನ ನೀಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ.
ಉತ್ತರ ಪ್ರದೇಶದ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಜೆಡಿಯು ಅಧ್ಯಕ್ಷ ಲಲ್ಲನ್ ಸಿಂಗ್, ಎಂ.ಡಿ.ಎಂ.ಕೆ.ಅಧ್ಯಕ್ಷ ವೈಕೋ, ಆರ್‍ಎಸ್‍ಪಿ ಅಧ್ಯಕ್ಷ ಎನ್.ಕೆ.ಪ್ರೇಮಚಂದ್ರನ್, ಸಿಪಿಐ(ಎಂ.ಎಲ್)ದೀಪಾಂಕರ್ ಭಟ್ಟಾಚಾರ್ಯ, ವಿಸಿಕೆ ಅಧ್ಯಕ್ಷ ಡಾ.ತೋಲ್ ತಿರುಮಾವಳವನ್, ಆರ್‍ಎಲ್‍ಡಿ ಅಧ್ಯಕ್ಷ ಜಯಂತ್ ಚೌಧರಿ, ಕೇರಳ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ.ಮಣಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ ಅಧ್ಯಕ್ಷ ಸಾದಿಕ್ ಅಲಿ ತಂಙಳ್ ಅವರಿಗೆ ಆಹ್ವಾನ ನೀಡಲಾಗಿದೆ.







