ಪುತ್ತೂರು: ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೌರ್ಜನ್ಯ; ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು

ಪುತ್ತೂರು: ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ವಿಚಾರಕ್ಕೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ಉಳ್ಳಾಲದ ವ್ಯಕ್ತಿಯೊಬ್ಬರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಉಳ್ಳಾಲದ ತೊಕ್ಕೊಟ್ಟು ಕೃಷ್ಣನಗರ ನಿವಾಸಿ ಅಜಿತ್ ಕುಮಾರ್ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮೇ. 18 ರಂದು ಅವರು ದೂರು ದಾಖಲಿಸಿದ್ದಾರೆ.
ಮೇ 16 ರಂದು ಕೆಲವು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದ ಪುತ್ತೂರು ಪೊಲೀಸರು ಠಾಣೆಯಲ್ಲಿ ಯುವಕರ ಮೇಲೆ ಹಲ್ಲೆ ನಡೆಸಿ ಥರ್ಡ್ ಡಿಗ್ರಿ ಹಿಂಸೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
Next Story





