ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ದರ್ಶನ್, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ನಿನ್ನೆ ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ.
Next Story





