ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಉಪ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
Next Story