ನೂತನ ಸರ್ಕಾರಕ್ಕೆ ಶುಭಾಶಯ ಕೋರಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷದ ಪರಿಪೂರ್ಣ ಬೆಂಬಲ

ಕಾಂಗ್ರೆಸ್ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷದ ಪರಿಪೂರ್ಣ ಬೆಂಬಲ
ಬೆಂಗಳೂರು: ಇಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಮತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಮತ್ರಿ ಡಿ ಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು.
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.
Next Story





