ಸರಕಾರಿ ಬಸ್ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆ ನಂತರ ಪಂಚ ಯೋಜನೆಗಳ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೀರ್ಮಾನಗಳನ್ನು ಪ್ರಕಟಿಸಿದರು.
ಎಲ್ಲಾ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ. ಐಷಾರಾಮಿ ಬಸ್ ಗಳಲ್ಲಿ ಅವಕಾಶ ಇರುವುದಿಲ್ಲ, ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಅನ್ವಯ ಎಂದರು.
Next Story