ಮ್ಯಾಪ್ಸ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕಾಮರ್ಸ್ ಫೆಸ್ಟ್

ಮಂಗಳೂರು: ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಫೆಸ್ಟ್ ‘ನೇಗೇಟ್ 2023’ ಅನ್ನು ಆಯೋಜಿಸಲಾಗಿತ್ತು.
ಸಿ.ಎ.ಗೌರವ್ ಆರ್. ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮೆಚ್ಚುಗೆ ಸೂಚಿಸಿ , ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಆತವ್ಮಿಶ್ವಾಸ ಹೆಚ್ಚಿಸುತ್ತವೆ ಎಂದು ನುಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರುತಿ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರಣವ್ ಶೆಟ್ಟಿ ವಿವಿಧ ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು.
ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ದಿನೇಶ್ ಕುಮಾರ್ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿ.ಎ.ಸಿದ್ದಾರ್ಥ್ ಕಾಮತ್ ಭಾಗವಹಿಸಿದ್ದರು. ಪ್ರಾರಂಭದಲ್ಲಿ ಒಟ್ಟು 8 ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ಜರಗಿದ್ದು, ಒಟ್ಟು 12 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಕಾನೂನು ಕಾಲೇಜು ಸಮಗ್ರ ಪ್ರಶಸ್ತಿ ಪಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಫಲಕ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾಕರ್ ನೀರುಮಾರ್ಗ, ಕಾಮರ್ಸ್ ವಿಭಾಗದ ಮುಖ್ಯಸ್ಥ ಪ್ರಶಾಂತ್ ಅಲಿಸನ್, ಸಂಯೋಜಕಿ ರಕ್ಷಿತಾ ಶೆಟ್ಟಿ, ವಿದ್ಯಾರ್ಥಿ ಸಂಯೋಜಕ ಪ್ರಣವ್ ರಾಜ್ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ವೇತಾ ಕೆ ಹಾಗೂ ಸಂಯೋಜಕಿ ಭಾವಿಕಾ ಆರ್.ಆಚಾರ್ಯ ನಿರೂಪಿಸಿದರು.