ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ನೀಡುವ 'ಗೃಹಲಕ್ಷ್ಮಿ' ಯೋಜನೆ ಜಾರಿಗೆ ಅಧಿಕೃತ ಆದೇಶ

ಬೆಂಗಳೂರು: ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ನೀಡುವ 'ಗೃಹಲಕ್ಷ್ಮಿ' ಜಾರಿಗೆ ರಾಜ್ಯ ಸರ್ಕಾರದಿಂದ ಶನಿವಾರ ಅಧಿಕೃತ ಆದೇಶ ಪ್ರಕಟಗೊಂಡಿದೆ.
'ಕುಟುಂಬದ ಯಜಮಾನಿ ಮಹಿಳೆಗೆ ನೀಡುವ “ಗೃಹಲಕ್ಷ್ಮಿ ಯೋಜನೆ"ಯನ್ನು ಜಾರಿಗೆ ತರಲು ಸರ್ಕಾರವು ಉದ್ದೇಶಿಸಿದೆ. ಅದರಂತೆ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು' ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story