ದಲಿತ ಸಂಘಟನೆಗಳಿಂದ ಸಿದ್ದರಾಮಯ್ಯ ಕಟೌಟ್‌ಗೆ ಮಾಲಾರ್ಪಣೆಗೈದು ಸಂಭ್ರಮಾಚರಣೆ

ಉಡುಪಿ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಸಿದ್ದರಾಮಯ್ಯ ಅವರ ಕಟೌಟ್‌ಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಜಯನ್ ಮಲ್ಪೆ, ಪ್ರಜಾಪ್ರಭುತ್ವ ಹಕ್ಕುಗಳನ್ನು ಕಸಿಯುತ್ತಿ ರುವ ಇಂದಿನ ಸಂದರ್ಭದಲ್ಲಿ ಶೋಷಿತ ಸಮುದಾಯದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಯಾಗಿ ಆಯ್ಕೆ ಮಾಡಿರುವುದು ಹರ್ಷ ತಂದಿದೆ. ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ನೀಡುವ ನಿಜವಾದ ಜನ ನಾಯಕ ಸಿದ್ದರಾಮಯ್ಯ. ಅಂಬೇಡ್ಕರ್ ಚಿಂತನೆ ಜಾರಿ ಗೊಳಿಸಲು ಪ್ರಮುಖ ನಾಯಕನನ್ನು ರಾಜ್ಯದ ಜನತೆ ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ನಾವು ಜನರನ್ನು ಅಭಿನಂದಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ದಲಿತ ಮುಖಂಡರಾದ ಸುಂದರ್ ಮಾಸ್ತರ್, ಶ್ಯಾಮ್‌ರಾಜ್ ಬಿರ್ತಿ, ವಾಸುದೇವ ಮುದ್ದೂರು, ಶ್ಯಾಮ್ ತೆಕ್ಕಟ್ಟೆ, ಸಂಜೀವ ಬಳ್ಕೂರು, ಗಣೇಶ್ ನೆರ್ಗಿ, ಶಿವಾನಂದ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.