ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು, ಮೇ 22: ರಾಜ್ಯ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಕೆ.ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಪ್ರಭುಲಿಂಗ ಕೆ. ನಾವದಗಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಶಶಿಕಿರಣ್ ಶೆಟ್ಟಿ ಅವರು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮಗ.
ಹಿಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಉದಯ್ ಹೊಳ್ಳ ಅಡ್ವೊಕೇಟ್ ಜನರಲ್ ಆಗಿದ್ದರು. ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರಭುಲಿಂಗ ಕೆ.ನಾವದಗಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಬಸವರಾಜ ಬೊಮ್ಮಾಯಿ ಸರಕಾರದಲ್ಲೂ ಅವರೇ ಎಜಿಯಾಗಿ ಮುಂದುವರಿದಿದ್ದರು. ಇದೀಗ ಕಾಂಗ್ರೆಸ್ ಸರಕಾರದಲ್ಲಿ ಶಶಿಕಿರಣ್ ಶೆಟ್ಟಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದಾರೆ.
Next Story