ಝೈನುಲ್ ಉಲಮಾ ಮಾಣಿ ಉಸ್ತಾದರಿಗೆ ದುಬೈಯಲ್ಲಿ ಭವ್ಯ ಸ್ವಾಗತ
ದುಬೈ: ಅಲ್ ಕೂಝ್ ನಲ್ಲಿರುವ ಡೀವ್ವಾಲ್ ಸ್ಕೂಲ್ ಸಭಾಂಗಣದಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುವ 5ನೇ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಲು ಯುಎಇಗೆ ಆಗಮಿಸಿದ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಅದ್ಯಕ್ಷರು ಹಾಗೂ ಉಡುಪಿ ಚಿಕ್ಕಮಂಗಳೂರು ಜಿಲ್ಲೆಯ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ರವರನ್ನು ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಕೆಸಿಎಫ್ ಯುಎಇ ನಾಯಕರು ಶನಿವಾರ ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಉಪಾದ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರ,ಕರೀಂ ಮುಸ್ಲಿಯಾರ್ ಶಾರ್ಜ,ಖಲಂದರ್ ಕಬಕ, ಮಜೀದ್ ಮಂಜನಾಡಿ,ಶುಕೂರ್ ಉಳ್ಳಾಲ,ಶರೀಫ್ ಬೈರಿಕಟ್ಟೆ ಸಹಿತ ಇನ್ನಿತರ ಹಲವಾರು ನಾಯಕರು ಉಪಸ್ಥಿತರಿದ್ದರು.
Next Story