ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹುತಾತ್ಮನಾದ ದಿನವಾದ ಇಂದು ಕೆಪಿಸಿಸಿ ಕಚೇರಿಯಲ್ಲಿ ಗೌರವ ನಮನ ಸಲ್ಲಿಸಲಾಯಿತು.
ದಿವಂಗತ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಭಾಗವಹಿಸಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಸಚಿವರಾದ ಎಂ. ಬಿ ಪಾಟೀಲ್, ಸತೀಶ್ ಜಾರಕಿಹೊಳಿ ಹಾಗೂ ಇತರ ನಾಯಕರು ಭಾಗವಹಿಸಿದ್ದರು.
Next Story





