Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ...

ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ಗೌರವ: ಮುಖ್ಯಮಂತ್ರಿ ಸಿದ್ದರಾಮಯ್ಯ

21 May 2023 10:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ಗೌರವ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 21: ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಇರುವವರೆಗೂ  ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಮರಸ್ಯ ಇರುವುದಿಲ್ಲ. ಬಡವರು, ದಲಿತರು, ಹಿಂದುಳಿದವರು ದೇಶದ ಅನೇಕ ಭಾಗಗಳಲ್ಲಿ ಆತಂಕದಲ್ಲಿ ಬದುಕುತ್ತಿದ್ದಾರೆ. ಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆ. ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಬೇಕಿದೆ. ಇದನ್ನು ಸ್ಥಾಪಿಸಲು ಮಾಜಿ ಪ್ರಧಾಣಿಗಳಾದ  ಇಂದಿರಾ ಗಾಂಧಿ ಹಾಗೂ  ರಾಜೀವ್ ಗಾಂಧಿ ಮತ್ತಿತರರು  ಪ್ರಯತ್ನಿಸಿದರು.  ರಾಜೀವ್ ಗಾಂಧಿಯಂತಹ ಮಹಾನ್ ನಾಯಕನೊಬ್ಬನನ್ನು ಭಯೋತ್ಪಾದನೆ ಬಲಿತೆಗೆದುಕೊಂಡಿದೆ.  ರಾಜೀವ್ ಗಾಂಧಿಯವರು ಒಬ್ಬ ಕ್ರಿಯಾಶೀಲ ನಾಯಕರು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು. ಅವರು ಹಾಕಿಕೊಟ್ಟ ದಾರಿಯಲ್ಲಿ ಎಲ್ಲರೂ ನಡೆಯುವ ಪ್ರಯತ್ನ ಮಾಡೋಣ ಎಂದರು.

ಕಾಂಗ್ರೆಸ್ ನವರು ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆ ಎಂದು ಮಾತನಾಡುವ ಬಿಜೆಪಿಯವರು  ಯಾರೂ ಭಯೋತ್ಪಾದನೆಯಲ್ಲಿ ಪ್ರಾಣ ಕಳೆದುಕೊಂಡಿಲ್ಲ.  ಕಾಂಗ್ರೆಸ್ಸಿನವರು ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಹೋರಾಡಿದರು. ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯ. ಜನರ ನೆಮ್ಮದಿ, ಶಾಂತಿಯನ್ನು ಹಾಳು ಮಾಡುವ ಭಯೋತ್ಪಾದನೆಯನ್ನು ತೊಡೆದುಹಾಕಲು ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ಮಾಡುತ್ತಿದೆ. ಭಯೋತ್ಪಾದನೆಗೆ  ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿ ಬಲಿಯಾಗಿದ್ದಾರೆ. ದೇಶದ ಐಕ್ಯತೆ, ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಡಿ, ಭಾರತೀಯರಿಗೆ ಅವರದ್ದೇ ಸರ್ಕಾರ  ರೂಪಿಸಲು ಅವಕಾಶ ಮಾಡಿಕೊಟ್ಟಿದ್ದು ಕಾಂಗ್ರಸ್ ಪಕ್ಷ. ಸ್ವಾತಂತ್ರ್ಯದ ಬೆಲೆ ಕಾಂಗ್ರೆಸ್ ಗೆ ತಿಳಿದಿದೆ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ತಮ್ಮದೇ ಕೊಡುಗೆ ನೀಡಿದ್ದಾರೆ.  ನೆಹರೂ ಅವರು ಪ್ರಜಾಪ್ರಭುತ್ವದ ಬುನಾದಿ ಹಾಕಿದವರು.  ಭಾರತದಂತಹ ದೊಡ್ಡ ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಜವಾಹರ್ ಲಾಲ್ ನೆಹರು ಅವರು ಹಾಕಿದ ಬುನಾದಿಯೇ ಕಾರಣ.  ಈಗಿನ ಪ್ರಧಾನಿಗಳಿಗೂ ನೆಹರೂ ಅವರಿಗೂ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಬಯಸಿದ್ದರು. ರಾಹುಲ್ ಗಾಂಧಿಯವರು ಅದನ್ನು ಮುಂದುವರೆಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿದೆ. ಜನತಂತ್ರದ ವಿಕೇಂದ್ರೀಕರಣ ಜಾರಿಗೆ ತಂದಿದ್ದು ರಾಜೀವ್ ಗಾಂಧಿಯವರು. ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಮಸೂದೆ ಇದೆ. ಶೇ 50 ಕ್ಕೆ ಏರಿಸಿದರೆ ನಮ್ಮ ತಕರಾರು ಇಲ್ಲ. ನಿಜವಾದ ಅರ್ಥದಲ್ಲಿ ಸಮಪಾಲು ಸಮಬಾಳು ದೊರೆಯಬೇಕು. ದೇಶದಲ್ಲಿ ಜ್ಯಾತ್ಯಾತೀತ ವ್ಯವಸ್ಥೆ ಉಳಿದು ಬೆಳೆಯಲು ಕಾಂಗ್ರೆಸ್ ಪಕ್ಷ ಕಾರಣ. ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ರಾಜೀವ್‍ಗಾಂಧಿಯವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಚುನಾವಣೆಯ ಗೆಲುವು  ಕಾಂಗ್ರೆಸ್ ಪಕ್ಷದ್ದಲ್ಲ, ಇದು  ಏಳು ಕೋಟಿ ಕನ್ನಡಿಗರ ಗೆಲುವು ಎಂದ ಮುಖ್ಯಮಂತ್ರಿಗಳು, ಜನ ಸುಭದ್ರ  ಸರ್ಕಾರವನ್ನು ಬಯಸಿದ್ದಾರೆ.  ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದೇ ನಮ್ಮ ಮುಂದಿರುವ ಸವಾಲು.  ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿರುವ ವ್ಯಾಖ್ಯಾನಕ್ಕೆ ಉತ್ತರ ನೀಡಿ ಮುಂದಿನ ಅಧಿವೇಶನದಲ್ಲಿ ಈ ಐದೂ ಗ್ಯಾರಂಟಿಗಳನ್ನು ಮತ್ತೊಮ್ಮೆ ಸ್ಥಿರೀಕರಿಸಿ ಆದೇಶ ಹೊರಡಿಸಿ ಅಂದಿನಿಂದಲೇ ಜಾರಿಗೆ ತರುತ್ತೇವೆ. ಮಾಹಿತಿ ಸಂಗ್ರಹಣೆ ಮುಗಿದ ಕೂಡಲೇ ಅನುಮೋದನೆ ನೀಡಿ, ಆದೇಶ ಹೊರಡಿಸಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಅನೇಕ ವಿಚಾರಗಳನ್ನೂ ಜಾರಿಗೆ ತರಲಾಗುವುದು. ಭರವಸೆಗಳನ್ನು ಚಾಚೂ ತಪ್ಪದೆ ಈಡೇರಿಸಿ,  ನುಡಿದಂತೆ ನಡೆಯುವುದಾಗಿ ಭರವಸೆಯಿತ್ತರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ , ಬಿ.ಕೆ ಹರಿಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X