Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ...

"ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ" ಪುತ್ತಿಲ ಬೆಂಬಲಿಗರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ

`ಪುತ್ತಿಲ ಪರಿವಾರ' ಲಾಂಚನ ಬಿಡುಗಡೆ

21 May 2023 9:40 PM IST
share
ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ ಪುತ್ತಿಲ ಬೆಂಬಲಿಗರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ
`ಪುತ್ತಿಲ ಪರಿವಾರ' ಲಾಂಚನ ಬಿಡುಗಡೆ

ಪುತ್ತೂರು: ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ `ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆದ ಎಂಬ ಪಾದಯಾತ್ರೆ ಹಾಗೂ `ಸೇವಾ ಸಮರ್ಪಣಾ ಕಾರ್ಯಕ್ರಮ ರವಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭ `ಪುತ್ತಿಲ ಪರಿವಾರ' ಲಾಂಚನ ಬಿಡುಡೆಗೊಳಿಸಲಾಯಿತು.

ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆಯಿಂದ ಮುಖ್ಯರಸ್ತೆಯಲ್ಲಿ ದೇವಸ್ಥಾನದ ಗದ್ದೆಗೆ ಪಾದಯಾತ್ರೆ ನಡೆಯಿತು. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು. 

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅವರು ಮೋದಿ ಅವರನ್ನು ಪಕ್ಷದ ಕಡೆಯಿಂದ ಪ್ರಧಾನಿಯಾಗಿ ಆಯ್ಕೆ ಮಾಡಿಲ್ಲ. ಬದಲಿಗೆ ದೇಶದ ಅಸಂಖ್ಯಾತ ಧ್ವನಿಗಳ ಕಾರಣದಿಂದ ಪ್ರಧಾನಿಯಾದರು. ಬಡ ಜನರ ಸೇವೆ ಮಾಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಲ್ಲದಕ್ಕೂ ಧೈವಬಲ ಕಾರಣವಾಗಿದೆ. ಅದೇ ರೀತಿ ದೈವ ಬಲ ಇರುವ ಕಾರಣಕ್ಕೆ ಪುತ್ತಿಲ ಅವರಿಗೆ ಈ ರೀತಿಯಾದ  ಜನರ ಪ್ರೀತಿ ಬೆಂಬಲ ಸಿಕ್ಕಿದೆ. ಇದೆಲ್ಲಾ ಶ್ರೀ ಮಹಾಲಿಂಗೇಶ್ವರನ ಸಂಕಲ್ಪ ಎಂದ ಅವರು ಅಭ್ಯರ್ಥಿಗಳು ಹಣ ಹಂಚುವ ದಿನದಲ್ಲಿ ಮತದಾರ ಹಣ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪುತ್ತಿಲ ಅವರು ಹಲವು  ಇತಿಹಾಸವನ್ನು ಸೃಷ್ಟಿಸಿದ್ದಾರೆ ಎಂದರು.

ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಚುನಾವಣೆಗೆ ಸ್ಪರ್ಧಿಸುವಾಗ ಗೋ ಹತ್ಯೆ ಆಗುವುದಿಲ್ಲ. ಹಿಂದೂ ಸಹೋದರಿಯರ ಮಾನಭಂಗ ನಡೆಯುವುದಿಲ್ಲ. ಧಾರ್ಮಿಕ ಕೇಂದ್ರ ಸಮಾಜಕ್ಕೆ ಶಕ್ತಿ ಕೊಡುತ್ತದೆ ಎಂಬ ವಿಶ್ವಾಸ ನಮಗಿತ್ತು. ಆದರೆ ಹಣ ಹಂಚಿಕೆ, ಅಪಪ್ರಚಾರ ಇನ್ನಿತರ ವಾಮಮಾರ್ಗದ ಕಾರಣದಿಂದಾಗಿ ನಮಗೆ ಸಣ್ಣ ಅಂತರದಿಂದ ಸೋಲಾಯಿತು. ಹಿಂದೂ ಸಮಾಜ ಶಕ್ತಿಯಾಗಬೇಕು ಎಂಬುದು ತಾಯಂದಿರಲ್ಲಿ ಮಠಾಧಿಪತಿಗಳಲ್ಲಿ, ಸಂಘ ಪರಿವಾರದಲ್ಲಿ, ಬಿಜೆಪಿ ಪದಾಧಿಕಾರಿಗಳಲ್ಲಿತ್ತು. ಕೆಲ ನಾಯಕರ ತಪ್ಪು ಹೆಜ್ಜೆಗಳಿಂದಾಗಿ ಅಂತಹ ಅವಕಾಶ ತಪ್ಪಿ ಹೋಯಿತು. ಮೇಲಿನ ಸ್ಥಾನದಲ್ಲಿ ಕುಳಿತಿದ್ದ ನಾಯಕರು ಮಾಡಿದ ತಪ್ಪು ನಿರ್ಧಾರದಿಂದಾಗಿ ಹಿಂದೂ ಸಮಾಜಕ್ಕೆ ಶಕ್ತಿ ಕೊಡಬೇಕಾದ ನಾವು ಶಕ್ತಿ ಕಳೆದುಕೊಂಡೆವು ಎಂದರು. 

ನನ್ನಲ್ಲಿ ಎಂದೂ ಜಾತಿ ಇಲ್ಲ. ಇರುವುದು ಹಿಂದುತ್ವ ಮಾತ್ರ. ಆಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ. ಆದರೂ ನನ್ನ ಬಗ್ಗೆ ಹಲವಾರು ಅಪಮಾನ, ಅಪವಾದಗಳನ್ನು ಮಾಡಿದರು. ಅವರಿಗೆ ನನ್ನ ಕಣ್ಣೀರಿನ ಹನಿ ತಟ್ಟಲಿದೆ. ಶ್ರೀ ಮಹಾಲಿಂಗೇಶ್ವರ ಉತ್ತರ ನೀಡಲಿದ್ದಾನೆ. ದೈವ ದೇವರುಗಳು ಅವರಿಗೆ ಪಶ್ಚಾತ್ತಾಪದ ಜೊತೆಗೆ ಸನ್ನಡತೆಯನ್ನು ನೀಡಲಿ ಎಂದ ಅವರು ಚುನಾವಣೆಯಲ್ಲಿ ನಾನು ಸೋತ್ತಿದ್ದರೂ ಕಾರ್ಯಕರ್ತರ ವಿಶ್ವಾಸಕ್ಕೆ ಪಾತ್ರನಾಗಿದ್ದೇನೆ. ಸ್ಪರ್ಧೆಯ ಮೂಲಕ ದೇಶಕ್ಕೆ ಬದಲಾವಣೆಯ ಚಿಂತನೆ ನೀಡಿದ್ದೇನೆ ಎಂದು ಹೇಳಿದರು.  

ಪ್ರಸನ್ನ ಕುಮಾರ್ ಮಾರ್ತ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಸುರೇಶ್ ಪುತ್ತೂರಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದ್ಯಮಿ ರಾಜಶೇಖರ್ ಬನ್ನೂರು ಪುತ್ತಿಲ ಪರಿವಾರ ಸಂಘಟನೆಯ ನೂತನ ಲಾಂಚನ ಬಿಡುಗಡೆಗೊಳಿಸಿದರು. ವಸಂತ ಲಕ್ಷ್ಮೀ ಮತ್ತು ಡಾ. ಗಣೇಶ್ ಪ್ರಸಾದ್ ಮುದ್ರಜೆ ಉಪಸ್ಥಿತರಿದ್ದರು. ಉಮೇಶ್ ಕೋಡಿಬೈಲು ಸ್ವಾಗತಿಸಿದರು.  ನವೀನ್ ಪಂಜಳ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ದರ್ಬೆಯಲ್ಲಿ ಚಾಲನೆ ಪಡೆದುಕೊಂಡ ಕಾಲ್ನಡಿಗೆ ಜಾಥಾ, ಮುಖ್ಯರಸ್ತೆಯಾಗಿ ಸಾಗಿ ದೇವಸ್ಥಾನದ ದೇವರಮಾರು ಗದ್ದೆಗೆ ಆಗಮಿಸಿತು. 

share
Next Story
X