Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನೊಂದು ಧರ್ಮೀಯನನ್ನು ಪ್ರೀತಿಸಿದ...

ಇನ್ನೊಂದು ಧರ್ಮೀಯನನ್ನು ಪ್ರೀತಿಸಿದ ಯುವತಿಗೆ ತನ್ನಿಷ್ಟದ ಸ್ಥಳದಲ್ಲಿ ನೆಲೆಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

21 May 2023 10:50 PM IST
share
ಇನ್ನೊಂದು ಧರ್ಮೀಯನನ್ನು ಪ್ರೀತಿಸಿದ ಯುವತಿಗೆ ತನ್ನಿಷ್ಟದ ಸ್ಥಳದಲ್ಲಿ ನೆಲೆಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

ಬೆಂಗಳೂರು: ಇನ್ನೊಂದು ಧರ್ಮದ ಯುವಕನನ್ನು ಪ್ರೀತಿಸಿರುವ ಯುವತಿಗೆ ಈಗ ತನ್ನಿಷ್ಟವಾದ ಸ್ಥಳದಲ್ಲಿ ನೆಲೆಸುವುದಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯೊಬ್ಬಳನ್ನು ಆಕೆಯ ಪಾಲಕರು ಅಕ್ರಮ ಬಂಧನದಲ್ಲಿಟ್ಟಿದ್ದಾರೆಂದು ಆರೋಪಿಸಿ ಯುವಕನೊಬ್ಬ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಅವಕಾಶ ಕಲ್ಪಿಸಿದೆ.

ಇದೇ ಯುವತಿಗೆ ಸಂಬಂಧಿಸಿದಂತೆ 2023ರ ಮೇ 11ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯುವತಿಗೆ ಮೇ 16ರ ವರೆಗೆ ಪುನರ್ವಸತಿ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿತ್ತು. ಮೇ 16ರಂದು ಅರ್ಜಿ ಮತ್ತೆ ವಿಚಾರಣೆಗೆ ಬಂದಾಗ ಯುವತಿ ಹಾಜರಾಗಿ, ತನಗೆ 24 ವರ್ಷವಾಗಿದೆ. ತಾನು ವಯಸ್ಕಳಾಗಿದ್ದು, ಕಚೇರಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದೇನೆ. ನನಗೆ ಪಾಲಕರೊಂದಿಗೆ ಹೋಗಲು ಇಷ್ಟವಿಲ್ಲ. ಸದ್ಯ ತಂಗಿರುವ ಪುನರ್ವಸತಿ ಕೇಂದ್ರದಲ್ಲಿ ಉಳಿಯಲೂ ಇಚ್ಛೆಯಿಲ್ಲ. ಹೀಗಾಗಿ ಮುಕ್ತವಾಗಿರಲು ಬಯಸಿದ್ದು, ನಾನು ಇಷ್ಟಪಡುವ ಪಿಜಿಯಲ್ಲಿ ನೆಲೆಸಲು ಬಯಸುತ್ತಿದ್ದೇನೆ. ಅದಕ್ಕೆ ಅವಕಾಶ ಕೊಡಬೇಕು. ಆ ಜಾಗ ನನಗೆ ಸುರಕ್ಷಿತವಾಗಿದೆ. ನಾನು ಉಳಿದುಕೊಳ್ಳುವ ಪಿಜಿಯ ವಿಳಾಸ ಬಹಿರಂಗಪಡಿಸುವುದಿಲ್ಲ. ನನಗೆ ಯಾವುದೇ ಪೊಲೀಸ್ ರಕ್ಷಣೆ ಸಹ ಬೇಡ ಎಂದು ವಿವರಿಸಿದರು.

ಈ ಅಂಶವನ್ನು ಒಪ್ಪಿದ ನ್ಯಾಯಪೀಠ, ಯುವತಿಯು ಬಯಸಿದ ಜಾಗದಲ್ಲಿ ನೆಲಸಲು ಅನುಮತಿ ನೀಡಿತು. ಅಲ್ಲದೆ, ಒಂದೊಮ್ಮೆ ಯುವತಿಗೆ ಯಾವುದೇ ಸಮಸ್ಯೆ ಎದುರಾದರೂ ಹತ್ತಿರದ ಪೊಲೀಸ್ ಠಾಣೆಯ ಮೊರೆ ಹೋಗಬಹುದು. ಸಂಬಂಧಪಟ್ಟ ಪೊಲೀಸರು ಯುವತಿಗೆ ಸೂಕ್ತ ನೆರವು ಕಲ್ಪಿಸಬೇಕು ಎಂದು ನಿರ್ದೇಶಿಸಿತು.

ಇದೇ ವೇಳೆ ಯುವತಿಯ ತಂದೆ ಪರ ವಕೀಲರು, ಅರ್ಜಿದಾರ ಯುವಕನೊಂದಿಗೆ ಚರ್ಚಿಸಿ (ಯುವತಿ ತಂದೆ) ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಪುರಸ್ಕರಿಸಿದ ನ್ಯಾಯಪೀಠ, ಸಮಯಾವಕಾಶ ಕಲ್ಪಿಸಿ ವಿಚಾರಣೆ ಮುಂದೂಡಿತು. ಅಂದು ಯುವತಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿತು.

share
Next Story
X