ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಎಸ್.ಎಂ. ಕೃಷ್ಣ ಅವರನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಭೇಟಿನೀಡಿದರು.
ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದ ಡಿಕೆಶಿ, ಇದೇ ವೇಳೆ ಬ.ನ. ಸುಂದರ ರಾವ್ ಅವರು ಬರೆದಿರುವ ಬೆಂಗಳೂರು ಇತಿಹಾಸ ಎನ್ನುವ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು.