ಬೆಂಗಳೂರು: ಭೀಕರ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ; ಮೃತದೇಹ ಪತ್ತೆ
ಮಹಾಮಳೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ

ಮಹಾಮಳೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ
ಬೆಂಗಳೂರು: ಭಾನುವಾರ ರಾಜಧಾನಿಯಲ್ಲಿ ಸುರಿದ ಧಾರಾಕಾರ ಮಳೆಗೆ ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.
ಲೋಕೇಶ್ (27) ಸಾವನ್ನಪ್ಪಿದ ಯುವಕ. ಜೋರಾದ ಮಳೆಯಿಂದಾಗಿ ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿಹೋದ ಲೋಕೇಶ್ ನ ಮೃತದೇಹ ಇಂದು ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಕೊಚ್ಚಿಹೋಗಿರುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story