ವಿಧಾನ ಮಂಡಲ ಅಧಿವೇಶನ: ನೂತನ ಶಾಸಕರಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಪ್ರಮಾಣವಚನ

ಬೆಂಗಳೂರು: ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ಆರಂಭಗೊಂಡಿದ್ದು, ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿರುವ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಸದನದ ಕಾರ್ಯ ಕಲಾಪಗಳನ್ನು ನಡೆಸಿಕೊಡಲಿದ್ದಾರೆ.
ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದರೆ, ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Next Story