ಮೋದಿ ಡಾಕ್ಯಮೆಂಟರಿ ಕುರಿತು ಮಾನನಷ್ಟ ತನಿಖೆಗೆ ಬಿಬಿಸಿಗೆ ದಿಲ್ಲಿ ಹೈಕೋರ್ಟ್ ಸಮನ್ಸ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಇನ್ನಿತರರನ್ನು ಮಾನನಷ್ಟ ಮಾಡಲಾಗಿದೆ ಎಂದು ಆರೋಪಿಸಿ ಗುಜರಾತ್ ಮೂಲದ ಜಸ್ಟಿಸ್ ಆನ್ ಟ್ರಯಲ್ ಎಂಬ ಎನ್‌ಜಿಒ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದಿಲ್ಲಿ ಹೈಕೋರ್ಟ್ ಭಾರತದ ಮತ್ತು ನ್ಯಾಯಾಂಗದ ಪ್ರತಿಷ್ಠೆಗೆ ಹಾನಿಯುಂಟು ಮಾಡಿದ ಆರೋಪದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ಗೆ (ಬಿಬಿಸಿ) ಸಮನ್ಸ್ ಜಾರಿ ಮಾಡಿದೆ ಎಂದು ndtv.com ವರದಿ ಮಾಡಿದೆ.
ಬಿಬಿಸಿಯ ಈ ಸಾಕ್ಷ್ಯಚಿತ್ರವು ಮಾನಹಾನಿಕರ ಆರೋಪವನ್ನು ಮಾಡುತ್ತದೆ ಮತ್ತು ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯನ್ನು ನಿಂದಿಸುತ್ತದೆ ಮತ್ತು ಪ್ರಧಾನ ಮಂತ್ರಿಯನ್ನು ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದೆ.
Next Story