Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಗದೀಶ್ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ...

ಜಗದೀಶ್ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ ನೀಡಲು ಪಕ್ಷ ತೀರ್ಮಾನಿಸಿದೆ: ಎಂ.ಬಿ.ಪಾಟೀಲ್

''ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು''

22 May 2023 6:06 PM IST
share
ಜಗದೀಶ್ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ ನೀಡಲು ಪಕ್ಷ ತೀರ್ಮಾನಿಸಿದೆ: ಎಂ.ಬಿ.ಪಾಟೀಲ್
''ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು''

ತುಮಕೂರು.ಮೇ.22: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಸೋಲುಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಎಐಸಿಸಿ ಮತ್ತು ಕೆ.ಪಿ.ಸಿ.ಸಿ ಮುಖಂಡರು ಚರ್ಚೆ ನಡೆಸಿದ್ದಾರೆ.ಅವರಿಗೆ ಸೂಕ್ತ ಸ್ಥಾನ ಮಾನ ಕೊಡುವುದು ನಿಶ್ಚಿತ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. 

ಸೋಮವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರೇಂದ್ರಪಾಟೀಲ್ ನಂತರ ಇದೇ ಪ್ರಥಮ ಬಾರಿಗೆ ಬಿಜೆಪಿಯ ಅಪಪ್ರಚಾರವನ್ನು ಮೆಟ್ಟಿನಿಂತು ಲಿಂಗಾಯಿತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‍ಗೆ ಮತ ನೀಡಿದ್ದಾರೆ. ಇದರ ಜೊತೆಗೆ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಹಾಗಾಗಿ ಎಲ್ಲರನ್ನು ಒಳಗೊಂಡ ಮಂತ್ರಿ ಮಂಡಲ ಇದಾಗಬೇಕು. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಆಗಲಿದೆ ಎಂದು ತಿಳಿಸಿದರು.

ಯಾರಿಗೆ ಯಾವ ಖಾತೆ ನೀಡಬೇಕಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಇಂತಹ ಖಾತೆ ಇದ್ದರೆ ಜನರ ಸೇವೆ ಮಾಡಲು ಹೆಚ್ಚು ಅನುಕೂಲ ಎಂಬ ಮನದಾಳದ ಮಾತನ್ನು ಈಗಾಗಲೇ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಮುಂದಿನ ಗುರುವಾರ ಅಥವಾ ಶುಕ್ರವಾರ ಖಾತೆಗಳ ಹಂಚಿಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದರು. 

ಬಿಜೆಪಿಯವರು ಶೇ. 40 ಕಮಿಷನ್ ಆರೋಪಕ್ಕೆ ಆಧಾರ ಕೊಡಲಿ ಎಂದು ಕೇಳುತ್ತಿದ್ದಾರೆ.ಆದರೆ ಈ ಆರೋಪ ಮಾಡಿದ್ದು ನಾವಲ್ಲ. ಈ ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ. ಇದುವರೆಗೂ ಅವರ ವಿರುದ್ದ ಸರಕಾರ ಯಾವುದೇ ತನಿಖೆಗೆ ಮುಂದಾಗಿಲ್ಲ ಎಂದರೆ ಅವರ ಆರೋಪವನ್ನು ಒಪ್ಪಿಕೊಂಡಂತೆ ಅಲ್ಲವೇ ಎಂದು ಪ್ರಶ್ನಿಸಿದ ಅವರು,ಕೆಂಪಣ್ಣ ಅವರು ಬಿಜೆಪಿ ಪಕ್ಷದ ಮೇಲೆ ಆರೋಪ ಮಾಡಿ ಎರಡು ವರ್ಷ ಆಗಿದೆ. ಸಣ್ಣಪುಟ್ಟ ವಿಚಾರಗಳಿಗೂ ಐಟಿ,ಇಡಿ ದಾರಿ ಹಿಡಿಯುವ ಪ್ರಧಾನ ಮಂತ್ರಿಗಳು,ಈ ವಿಚಾರದಲ್ಲಿ ಏಕೇ ಮೌನವಹಿಸಿದ್ದಾರೆ.ಇದರ ಹಿಂದಿನ ಗುಟ್ಟೇನು ಎಂಬುದನ್ನು ಮಾಜಿ ಮುಖ್ಯಮಂತ್ರಿಗಳೇ ಬಹಿರಂಗ ಪಡಿಸಬೇಕು.ಓರ್ವ ನಿಗಮದ ಅಧ್ಯಕ್ಷನ ಮನೆಯಲ್ಲಿಯೇ ಕೋಟಿ,ಕೋಟಿ ಹಣ ಸಿಕ್ಕಿದೆ ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಎಂ.ಬಿ.ಪಾಟೀಲ್ ನುಡಿದರು.

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ಬೇಕು ಎನ್ನುವವರು ರಾಜ್ಯದಲ್ಲಿ ನಿಮ್ಮ ಸರಕಾರವಿದ್ದಾಗ ಎಷ್ಟು ಜನ ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆ ನಡೆಸಲಿ, ಅಲ್ಲದೆ ಒಂದು ಸರಕಾರ ಡಿಜಿಪಿ ಹುದ್ದೆಯಲ್ಲಿದ್ದ ವ್ಯಕ್ತಿಯೇ ಪಿ.ಎಸ್.ಐ ಹಗರಣದಲ್ಲಿ ಬಂಧಿಯಾಗಿದ್ದು,ಇದುವರೆಗೂ ಜಾಮೀನು ದೊರೆತಿಲ್ಲ.ನೇಮಕಾತಿ ಮತ್ತು ಕಾಮಗಾರಿಯಲ್ಲಿ ಭಷ್ಟ್ರಾಚಾರ ನಡೆದಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ, ಅದನ್ನು ಆಧಾರವಾಗಿಟ್ಟುಕೊಂಡು ತನಿಖೆ ನಡೆಸುತ್ತೇವೆ ಎಂದರು.

ಮೀಸಲಾತಿ ಹಂಚಿಕೆಯಲ್ಲಿ ಈ ಹಿಂದಿನ ಬಿಜೆಪಿ ಸರಕಾರ ಎಡವಿದೆ.ಸುಪ್ರಿಂಕೋರ್ಟಿನ ಆದೇಶ ಶೇ50 ಎಂಬುದನ್ನು ಮೀರಿದೆ. ಈಗಾಗಿ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ.ಈಗಾಗಲೇ ಮಹಾರಾಷ್ಟ್ರ, ಆಂಧ್ರ ಸೇರಿದಂತೆ ಹಲವಡೆ ನ್ಯಾಯಾಲಯ ತಡೆ ಹಿಡಿದಿದೆ. ಈ ಎಲ್ಲಾ ಅಂಶಗಳನ್ನು ತುಲನೆ ಮಾಡಿ, ನಾವು ಮೀಸಲಾತಿ ಘೋಷಿಸಬೇಕಿದೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವೇಳೆ ಸಚಿವ ಎಂ.ಬಿ.ಪಾಟೀಲ್ ಪತ್ನಿ ಶ್ರೀಮತಿ ಆಶಾಪಾಟೀಲ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಠ್,ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರರವಿಕುಮಾರ್,ಪುಟ್ಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. 

share
Next Story
X