ಪುತ್ತೂರು: ಯುವಕ ಆತ್ಮಹತ್ಯೆ

ಪುತ್ತೂರು: ಯುವಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಜಾರತ್ತಾರು ಎಂಬಲ್ಲಿ ಸೋಮವಾರ ನಡೆದಿದೆ.
ಜಾರತ್ತಾರು ನಿವಾಸಿ ಕುಂಜಿರ ಎಂಬವರ ಪುತ್ರ ರಿತೇಶ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜೀವನದಲ್ಲಿ ಜಿಗುಪ್ಸೆಗೊಂಡು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ
Next Story