ಮೇ 24ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಸ್ಪೀಕರ್ ಚುನಾವಣೆ ಕುರಿತು ಚರ್ಚೆ

ಬೆಂಗಳೂರು, ಮೇ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 24ರ ಬೆಳಗ್ಗೆ 9 ಗಂಟೆಗೆ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಮೇ 24ರಂದು ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾರನ್ನೂ ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಬೇಕು ಎಂಬುದರ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
Next Story