Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಚುನಾವಣಾ ಉದ್ದೇಶಕ್ಕಾಗಿ ಮಾತ್ರ ದಲಿತ,...

"ಚುನಾವಣಾ ಉದ್ದೇಶಕ್ಕಾಗಿ ಮಾತ್ರ ದಲಿತ, ಬುಡಕಟ್ಟು ರಾಷ್ಟ್ರಪತಿಗಳ ನೇಮಕ: ಮೋದಿ ಸರಕಾರದ ವಿರುದ್ಧ ಖರ್ಗೆ ವಾಗ್ದಾಳಿ

ನೂತನ ಸಂಸತ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರಕ್ಕೆ ಪ್ರತಿಪಕ್ಷಗಳ ಚಿಂತನೆ

22 May 2023 9:48 PM IST
share
ಚುನಾವಣಾ ಉದ್ದೇಶಕ್ಕಾಗಿ ಮಾತ್ರ ದಲಿತ, ಬುಡಕಟ್ಟು ರಾಷ್ಟ್ರಪತಿಗಳ ನೇಮಕ: ಮೋದಿ ಸರಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನೂತನ ಸಂಸತ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರಕ್ಕೆ ಪ್ರತಿಪಕ್ಷಗಳ ಚಿಂತನೆ

ಹೊಸದಿಲ್ಲಿ: ನೂತನ ಸಂಸತ್ ಕಟ್ಟಡವನ್ನು ಹಿಂದುತ್ವ ಸಿದ್ಧಾಂತದ ಪ್ರತಿಪಾದಕ ವಿ.ಡಿ.ಸಾವರ್ಕರ್ ಜನ್ಮದಿನವಾದ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಬಹಿಷ್ಕರಿಸುವ ಬಗ್ಗೆ ಪ್ರತಿಪಕ್ಷಗಳು ಯೋಚಿಸುತ್ತಿವೆ ಎನ್ನಲಾಗಿದೆ.

ಈ ಕಟ್ಟಡದ ಪಂಚಾಂಗಕ್ಕೆ ಅಡಿಗಲ್ಲನ್ನೂ 2020 ಡಿಸೆಂಬರ್ ನಲ್ಲಿ ಪ್ರಧಾನಿಯೇ ಹಾಕಿದ್ದರು. ಅಂದೂ ಕಾಂಗ್ರೆಸ್ ಮತ್ತು ಇತರ ಹಲವಾರು ಪ್ರತಿಪಕ್ಷಗಳು ಆ ಕಾರ್ಯಕ್ರಮದಿಂದ ದೂರವೇ ಉಳಿದಿದ್ದವು. ಇಂಥ ಕಟ್ಟಡವೊಂದಕ್ಕೆ ಅಡಿಗಲ್ಲು ಹಾಕುವ ಸಮಯ ಅದಲ್ಲ ಎನ್ನುವುದು ಪ್ರತಿಪಕ್ಷಗಳ ನಿಲುವಾಗಿತ್ತು. ಯಾಕೆಂದರೆ, ಆಗ ರೈತರು ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಕೊರೋನ ವೈರಸ್ ಸಾಂಕ್ರಾಮಿಕವು ವ್ಯಾಪಕವಾಗಿ ಹರಡಿತ್ತು. ಈ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹೇರಲಾದ ದೇಶವ್ಯಾಪಿ ಲಾಕ್ ಡೌನ್ ಗಳ ಪರಿಣಾಮವಾಗಿ ಜನರು ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದರು.

ನೂತನ ಸಂಸತ್ ಕಟ್ಟಡವನ್ನು ಮೋದಿ ಉದ್ಘಾಟಿಸುವುದನ್ನು ಹೆಚ್ಚಿನ ಪ್ರತಿಪಕ್ಷಗಳು ಟೀಕಿಸಿವೆ. ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಎನ್ನುವುದು ಅವುಗಳ ವಾದವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಬೇಕೇ ಅಥವಾ ದೂರ ಉಳಿಯಬೇಕೇ ಎನ್ನುವ ಬಗ್ಗೆ ಪ್ರತಿಪಕ್ಷಗಳು ಜಂಟಿ ನಿಲುವೊಂದನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.

ನೂತನ ಸಂಸತ್ ಕಟ್ಟಡವನ್ನು ಸಾವರ್ಕರ್ ಜನ್ಮದಿನದಂದು ಉದ್ಘಾಟಿಸಲಾಗುತ್ತದೆ ಎನ್ನುವುದು ತಿಳಿದುಬಂದ ಬಳಿಕ, ಕಾಂಗ್ರೆಸ್ ತನ್ನ ನಿಲುವನ್ನು ಕಠಿಣಗೊಳಿಸುತ್ತಿದೆ. ಆದರೆ, ಈಗ ಸಾವರ್ಕರ್ ವಿಷಯ ಕಾಂಗ್ರೆಸ್‌ಗೆ ಬಿಸಿ ತುಪ್ಪದಂತೆ ಆಗಿದೆ. ಯಾಕೆಂದರೆ, ಸಾವರ್ಕರ್ ಮೇಲಿನ ಯಾವುದೇ ದಾಳಿಯನ್ನು ತಾನು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನ ಮಿತ್ರಪಕ್ಷವಾಗಿರುವ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ)ಯು ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನ ಇನ್ನೊಂದು ಮಿತ್ರಪಕ್ಷವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಕೂಡ, ಸಾವರ್ಕರ್ ವಿರುದ್ಧ ದಾಳಿ ನಡೆಸದಂತೆ ಹಿಂದೊಮ್ಮೆ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ್ದರು.

ಸೋಮವಾರ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರಕಾರವು ರಾಷ್ಟ್ರಪತಿ ಕಚೇರಿಯನ್ನು ಕೇವಲ ತೋರಿಕೆಗಾಗಿ ಇರುವ ಕಚೇರಿಯ ಮಟ್ಟಕ್ಕೆ ಇಳಿಸಿದೆ ಎಂದು ಆರೋಪಿಸಿದ್ದಾರೆ.

‘‘ಮೋದಿ ಸರಕಾರವು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಜನರನ್ನು ರಾಷ್ಟ್ರಪತಿಯಾಗಿ ಆರಿಸುವುದು ಕೇವಲ ಚುನಾವಣಾ ಉದ್ದೇಶಗಳಿಗಾಗಿ ಎಂಬಂತೆ ಕಾಣುತ್ತದೆ. ನೂತನ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನು ಆಹ್ವಾನಿಸಲಾಗಿರಲಿಲ್ಲ. ಈಗ ನೂತನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನೂ ಆಹ್ವಾನಿಸಲಾಗಿಲ್ಲ’’ ಎಂದು ಖರ್ಗೆ ಹೇಳಿದರು.

ನೂತನ ಸಂಸತ್ ಕಟ್ಟಡವನ್ನು ದ್ರೌಪದಿ ಮುರ್ಮು ಉದ್ಘಾಟಿಸಿದ್ದರೆ, ಅದು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರಕಾರದ ಬದ್ಧತೆಯನ್ನು ಸೂಚಿಸುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಇದಕ್ಕೂ ಒಂದು ದಿನ ಮೊದಲು, ಅಂದರೆ ರವಿವಾರ, ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿಯವರು ಉದ್ಘಾಟಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದರು.

ಕಳೆದ ವಾರ, ಕಾಂಗ್ರೆಸ್ ಸಂಪರ್ಕ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೀಗೆ ಟ್ವೀಟ್ ಮಾಡಿದ್ದರು: ‘‘ನಮ್ಮ ದೇಶದ ಸ್ಥಾಪಕರೆಲ್ಲರಿಗೂ ಮಾಡಲಾದ ಅವಮಾನ. ಗಾಂಧಿ, ನೆಹರೂ, ಪಟೇಲ್, ಬೋಸ್ ಮುಂತಾದವರ ತಿರಸ್ಕಾರ. ಡಾ. ಅಂಬೇಡ್ಕರ್ಗೆ ಅವಮಾನ’’.

ಜಂಟಿ ಅಧಿವೇಶನಕ್ಕೆ 1,280 ಸದಸ್ಯರಿಗೆ ಸ್ಥಳಾವಕಾಶ

ನೂತನ ಸಂಸತ್ ಕಟ್ಟಡದ ಲೋಕಸಭಾ ವಿಭಾಗದಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ವಿಭಾಗದಲ್ಲಿ 300 ಸದಸ್ಯರು ಕುಳಿತುಕೊಳ್ಳಬಹುದಾಗಿದೆ ಎಂದು ಲೋಕಸಭಾ ಕಾರ್ಯಾಲಯ ತಿಳಿಸಿದೆ.

ಉಭಯ ಸದನಗಳ ಜಂಟಿ ಅಧಿವೇಶನದ ಸಂದರ್ಭದಲ್ಲಿ, ಲೋಕಸಭಾ ವಿಭಾಗದಲ್ಲಿ ಒಟ್ಟು 1,280 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.

share
Next Story
X