ಡಿಸೆಂಬರ್ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

ಬೆಂಗಳೂರು, ಮೇ 22: ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೆ ವ್ಯಾಪಿಸಿರುವ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಕಾರಿಡಾರ್ ಈ ವರ್ಷದ ಡಿಸೆಂಬರ್‍ನಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆಯಿದೆ.
ಈ ಹಿಂದೆ, ಕಾರಿಡಾರ್ ಅನ್ನು ಎರಡು ಹಂತಗಳಲ್ಲಿ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಉದ್ದೇಶಿಸಿತ್ತು, ಆದರೆ ರೋಲಿಂಗ್ ಸ್ಟಾಕ್ ಕೊರತೆಯಿಂದಾಗಿ, ಸಂಪೂರ್ಣ ವಿಸ್ತರಣೆಯನ್ನು ಏಕಕಾಲದಲ್ಲಿ ಪ್ರಾರಂಭಿಸಲು ನಿರ್ಧರಿಸಿದೆ.
ಎಲೆಕ್ಟ್ರಾನಿಕ್‍ಸಿಟಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ, ವಸತಿ ಪ್ರದೇಶಗಳಾದ ಜಯನಗರ, ಬಿಟಿಎಂ ಲೇಔಟ್ ಮತ್ತು ಎಚ್‍ಎಸ್‍ಆರ್ ಲೇಔಟ್ ನಡುವಣ ಹಳದಿ ಮಾರ್ಗದ ಪ್ರಯಾಣಿಕರು ಎಲೆಕ್ಟ್ರಾನಿಕ್ ಸಿಟಿ ಕಾರಿಡಾರ್‍ನಿಂದ ಪ್ರಯೋಜನ ಪಡೆಯಲಿದ್ದಾರೆ.
Next Story