Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಳ್ಳಾರಿಯ ಬ್ರಾಹ್ಮಣ ಸಂಘರ್ಷ ಸಮಿತಿಗೆ...

ಬಳ್ಳಾರಿಯ ಬ್ರಾಹ್ಮಣ ಸಂಘರ್ಷ ಸಮಿತಿಗೆ ಅಗ್ಗದ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರು

ಬೊಮ್ಮಾಯಿ ಸರಕಾರದಿಂದ ಬೊಕ್ಕಸಕ್ಕೆ 78 ಲಕ್ಷ ರೂ. ನಷ್ಟ

ಜಿ.ಮಹಾಂತೇಶ್ಜಿ.ಮಹಾಂತೇಶ್23 May 2023 2:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಳ್ಳಾರಿಯ  ಬ್ರಾಹ್ಮಣ ಸಂಘರ್ಷ ಸಮಿತಿಗೆ ಅಗ್ಗದ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರು
ಬೊಮ್ಮಾಯಿ ಸರಕಾರದಿಂದ ಬೊಕ್ಕಸಕ್ಕೆ 78 ಲಕ್ಷ ರೂ. ನಷ್ಟ

►► ಅರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿದ ಹಿಂದಿನ ಸಿಎಂ

ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸರಕಾರದಿಂದ ಯಾವುದೇ ಅನುದಾನವನ್ನು ನೀಡುವುದಿಲ್ಲ. ಪ್ರಾಧಿಕಾರಗಳು ಸ್ವ-ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಕಾರ್ಯನಿರ್ವಹಿಸುತ್ತವೆ. ಹೀಗಾಗಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ 1,275.16 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನಕ್ಕೆ ರಿಯಾಯಿತಿ ನೀಡಿದರೆ ಪ್ರಾಧಿಕಾರಕ್ಕೆ ಆರ್ಥಿಕವಾಗಿ ತುಂಬಾ ನಷ್ಟವಾಗುತ್ತದೆ ಎಂದು ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯವನ್ನು ನೀಡಿತ್ತು. ಆದರೂ ಈ ಅಭಿಪ್ರಾಯವನ್ನು ಬದಿಗೊತ್ತಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.10ರ ದರದಲ್ಲಿ ಮಂಜೂರು ಮಾಡಿ ಸರಕಾರಕ್ಕೆ 78,03,979 ರೂ. ನಷ್ಟಕ್ಕೆ ಕಾರಣವಾಗಿರುವುದು ದಾಖಲೆಯಿಂದ ತಿಳಿದು ಬಂದಿದೆ. 

ಬೆಂಗಳೂರು, ಮೇ 22: ಸಂಘಪರಿವಾರ ಹಿನ್ನೆಲೆ ಹೊಂದಿರುವ ರಾಷ್ಟ್ರೋತ್ಥಾನ ಪರಿಷತ್, ಜನಸೇವಾ ಟ್ರಸ್ಟ್ಗೆ ರಿಯಾಯಿತಿ ದರದಲ್ಲಿ ಗೋಮಾಳ, ನಾಗರಿಕ ಸೌಲಭ್ಯ ನಿವೇಶನಗಳನ್ನು ಮಂಜೂರು ಮಾಡಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಪ್ರಕರಣಗಳ ಬೆನ್ನಲ್ಲೇ ಇದೀಗ ಬಳ್ಳಾರಿಯ ಬ್ರಾಹ್ಮಣ ಸಂಘರ್ಷ ಸಮಿತಿಗೂ ಶೇ. 10ರ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರು ಮಾಡಲು ಅನುಮೋದಿಸಿದ್ದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಾಧಿಕಾರದ ಬೊಕ್ಕಸಕ್ಕೆ 78 ಲಕ್ಷ ರೂ. ನಷ್ಟ ಹೊರಿಸಿರುವುದು  ಇದೀಗ ಬಹಿರಂಗವಾಗಿದೆ.

ಹಿಂದಿನ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು, ಶಿವರಾಮ ಹೆಬ್ಬಾರ, ಎಸ್ ಸುರೇಶ್ ಕುಮಾರ್, ಶಾಸಕ ಜಿ ಸೋಮಶೇಖರ ರೆಡ್ಡಿ ಮತ್ತು ವಿಧಾನ ಪರಿಷತ್ನ ಕಾಂಗ್ರೆಸ್ನ ಸದಸ್ಯ ಯು ಬಿ ವೆಂಕಟೇಶ್ ಅವರು ನೀಡಿದ್ದ ಮನವಿಯನ್ನು ಪುರಸ್ಕರಿಸಿರುವ ನಗರಾಭಿವೃದ್ಧಿ ಇಲಾಖೆಯು ಅರ್ಥಿಕ ಇಲಾಖೆಯ ಅಭಿಪ್ರಾಯವನ್ನು ಬದಿಗೊತ್ತಿ  ಶೇ.10ರ ದರವನ್ನಷ್ಟೇ ವಿಧಿಸಿ 1,275.16 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ  78 ಲಕ್ಷ ರೂ. ನಷ್ಟವುಂಟಾಗಿದೆ.  ಈ ಸಂಬಂಧ ಸಚಿವ ಸಂಪುಟದ ನಡವಳಿ ಮತ್ತು ಕೆಲ ದಾಖಲೆಗಳು “the-file.in”ಗೆ ಲಭ್ಯವಾಗಿವೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರಿಕ ಸೌಲಭ್ಯ ನಿವೇಶನಗಳ ಹಂಚಿಕೆ) ನಿಯಮಗಳು 1991ರ ಅನ್ವಯ ಗುತ್ತಿಗೆ ಹಣವನ್ನು ಕಡಿಮೆ ಮಾಡಲು ಅವಕಾಶಗಳಿಲ್ಲ. ಆದರೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಮಂಡಿಸಿತ್ತು ಎಂಬುದು ಲಭ್ಯವಿರುವ ದಾಖಲೆಯಿಂದ ತಿಳಿದು ಬಂದಿದೆ.

ನಾಗರಿಕ ಸೌಲಭ್ಯ ನಿವೇಶವನ್ನು ಮಂಜೂರು ಮಾಡಿಸಿಕೊಂಡ ನಂತರ ಬ್ರಾಹ್ಮಣ ಸಂಘರ್ಷ ಸಮಿತಿಯು ಈ ದರವನ್ನು ಪರಿಷ್ಕರಿಸಿ ಶೇ.10ರ ದರದಲ್ಲಿ ರಿಯಾಯಿತಿ ದರವನ್ನು ಮಂಜೂರು ಮಾಡಬೇಕು ಎಂದು ಕೋರಿತ್ತು. ಇದೇ ಪ್ರಸ್ತಾವ ಆಧರಿಸಿ ಹಿಂದಿನ ಬಿಜೆಪಿ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು, ಶಿವರಾಮ ಹೆಬ್ಬಾರ, ಎಸ್ ಸುರೇಶ್ ಕುಮಾರ್ ಮತ್ತಿತರರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

►►  ಪ್ರಕರಣದ ಹಿನ್ನೆಲೆ

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಬಳ್ಳಾರಿ ನಗರದ ಟಿಎಸ್ ನಂ. 766 ಮತ್ತು 839ರಲ್ಲಿ  1,275.16 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನವನ್ನು ಮಂಜೂರು ಮಾಡಲು ಬ್ರಾಹ್ಮಣ ಸಂಘರ್ಷ ಸಮಿತಿಯು ಪ್ರಸ್ತಾವ ಸಲ್ಲಿಸಿತ್ತು. ಇದನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ 86,71,088 ರು.ಗಳಿಗೆ  ಮಂಜೂರು ಮಾಡಲಾಗಿತ್ತು. ಈ ಸಂಬಂಧ ಬ್ರಾಹ್ಮಣ ಸಂಘರ್ಷ ಸಮಿತಿಯು 8,67,109 ರೂ.ಗಳನ್ನು ಪಾವತಿಸಿತ್ತು. ಬಾಕಿ ಮೊತ್ತ 78,03,979 ರೂ.ಗಳನ್ನು ಪಾವತಿಸಬೇಕಿತ್ತು. 

ಆದರೆ ಈ ಹಣವನ್ನು ಪಾವತಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಸಮಿತಿಯು ಸರಕಾರಕ್ಕೆ ಕೋರಿಕೆ ಸಲ್ಲಿಸಿತ್ತು. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರಿಕ ಸೌಲಭ್ಯ ನಿವೇಶನಗಳ ಹಂಚಿಕೆ)ನಿಯಮಗಳು 1991ರ ನಿಯಮ 8(1)ರಲ್ಲಿ ನಾಗರಿಕ ಸೌಲಭ್ಯ ನಿವೇಶನಗಳ ಗುತ್ತಿಗೆ ಹಣವನ್ನು ನಿಗದಿಪಡಿಸಲಾಗಿದೆ. ಈ ನಿಯಮಗಳಲ್ಲಿ ಅವಕಾಶ ಕಲ್ಪಿಸಿರುವಂತೆ ಪ್ರಸ್ತಾಪಿತ ಸಿ ಎ ನಿವೇಶನಕ್ಕೆ ರಿಯಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಶೇ.10ರ ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ಕಡತವನ್ನು ಮಂಡಿಸಲಾಗಿತ್ತು ಎಂಬುದು ದಾಖಲೆಯಿಂದ ಗೊತ್ತಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X