Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೊಮ್ಮಾಯಿ ಅವಧಿಯಲ್ಲಿ ವಿವೇಚನೆಯ...

ಬೊಮ್ಮಾಯಿ ಅವಧಿಯಲ್ಲಿ ವಿವೇಚನೆಯ ದುರುಪಯೋಗ

ಸಿಎಂ ಪರಿಹಾರ ನಿಧಿಯಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಧನ

ಜಿ.ಮಹಾಂತೇಶ್ಜಿ.ಮಹಾಂತೇಶ್23 May 2023 8:28 AM IST
share
ಬೊಮ್ಮಾಯಿ ಅವಧಿಯಲ್ಲಿ ವಿವೇಚನೆಯ ದುರುಪಯೋಗ
ಸಿಎಂ ಪರಿಹಾರ ನಿಧಿಯಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಧನ

ಪರಿಹಾರ ನಿಧಿಯ ಶಾಖೆಯ ಅಧಿಕಾರಿಗಳು ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೇ 25 ಲಕ್ಷ ರೂ. ನೀಡಲು ಬಸವರಾಜ ಬೊಮ್ಮಾಯಿ ಅವರು ಅನುಮೋದಿಸಿದ್ದರು. ಅಲ್ಲದೇ ಈ ನಿಧಿಯು ಮುಖ್ಯಮಂತ್ರಿಯವರ ವಿವೇಚನೆಗೆ ಒಳಪಟ್ಟ ನಿಧಿಯಾಗಿದ್ದು, ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದೂ ಅಧಿಕಾರಿಗಳು ಟಿಪ್ಪಣಿಯಲ್ಲಿ ದಾಖಲಿಸಿರುವುದು ಗೊತ್ತಾಗಿದೆ.

ಬೆಂಗಳೂರು, ಮೇ 22: ದುಷ್ಕರ್ಮಿಗಳ ಮಾರಕ ದಾಳಿಯಿಂದ ಕೊಲೆಗೀಡಾಗಿದ್ದ  ಬಜರಂಗ ದಳದ ಶಿವಮೊಗ್ಗದ  ಕಾರ್ಯಕರ್ತ ಹರ್ಷ ಎಂಬಾತನಿಗೆ ಮುಖ್ಯಮಂತ್ರಿಯ ವಿವೇಚನೆಗೆ ಒಳಪಟ್ಟ ಪರಿಹಾರ ನಿಧಿಯಿಂದ 25 ಲಕ್ಷ ರೂ.ಭರಿಸಲು ಅನುಮೋದಿಸಿದ್ದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಮ್ಮ ವಿವೇಚನೆಯನ್ನು ದುರುಪಯೋಗಪಡಿಸಿಕೊಂಡಿದ್ದರು ಎಂಬುದು  ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

ಅಲ್ಲದೇ ಈ ಸಂಬಂಧ ತೆರೆದಿದ್ದ ಕಡತವನ್ನು ಒಂದು ವರ್ಷದ ಬಳಿಕ ಮುಖ್ಯಮಂತ್ರಿ ಸಚಿವಾಲಯವು ಒದಗಿಸಿದೆ.  ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ 25 ಲಕ್ಷ ರೂ. ಭರಿಸಿರುವ ಸಂಬಂಧ ಸಮಗ್ರ ಕಡತ ಪಡೆಯಲು ‘the-file.in’2022ರ ಮಾರ್ಚ್ 7ರಂದು ಆರ್ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು. 

ಒಂದು ತಿಂಗಳ ಅವಧಿಯೊಳಗೆ ಮಾಹಿತಿ ಒದಗಿಸಬೇಕಿದ್ದ ಮುಖ್ಯಮಂತ್ರಿ ಸಚಿವಾಲಯವು ಒಂದು ವರ್ಷದವರೆಗೂ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ.ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಮೂರ್ನಾಲ್ಕು ದಿನಗಳಲ್ಲೇ ಅಂದರೆ 2023ರ ಮೇ 20ರಂದು ಕಡತವನ್ನು (ಕಡತ ಸಂಖ್ಯೆ; ಸಿಎಂ/43/ಸಿಎಎಂಆರ್ಎಫ್/ಜಿಇಎನ್/2022)  ಒದಗಿಸಿದೆ.

►► ಸಿಎಂ ವಿವೇಚನೆ ದುರುಪಯೋಗ
ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಕಾರ್ಪೊರೇಟ್ ಕಂಪೆನಿಗಳು, ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳು, ಉದ್ಯಮಿಗಳು, ತೆರಿಗೆದಾರರು ಸೇರಿದಂತೆ ಇನ್ನಿತರ ವಲಯದ ಸಾಮಾನ್ಯರೂ ಸಹ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಾರೆ. ಈ ನಿಧಿಯಲ್ಲಿರುವ ದೇಣಿಗೆ ಹಣವನ್ನು ಅನಾರೋಗ್ಯ ಪೀಡಿತರಾದ ಬಿಪಿಎಲ್ ಪಡಿತರದಾರರಿಗೆ, ಅಶಕ್ತರಿಗೆ, ನಿರ್ಗತಿಕರ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ. ಈ ನಿಧಿಯು ಮುಖ್ಯಮಂತ್ರಿಯ ವಿವೇಚನೆಗೆ ಒಳಪಟ್ಟ ನಿಧಿಯಾಗಿದೆ.
 ಇಂತಹ ನಿಧಿಯಲ್ಲಿರುವ ಒಟ್ಟು ದೇಣಿಗೆ ಹಣವನ್ನು ಕೊಲೆ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿತರು ಮೃತರಾದ ಸಂದರ್ಭದಲ್ಲಿ ಅವರ ಅವಲಂಬಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಅವಕಾಶವಿಲ್ಲ.

ಆದರೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನಿಗೆ 25 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದಲೇ ಭರಿಸಲು ಅನುಮೋದನೆ ನೀಡಿರುವುದು ತಮ್ಮ ವಿವೇಚನೆಯನ್ನೇ ದುರುಪಯೋಗಪಡಿಸಿಕೊಂಡಂತಾಗಿದೆ.

 ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ ಮತ್ತು ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತ 2022ರ ಫೆ.20ರಂದು ದುಷ್ಕರ್ಮಿಗಳ ಮಾರಕ ದಾಳಿಯಿಂದ ಹತ್ಯೆಗೀಡಾಗಿದ್ದ. ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಭೇಟಿಯಾಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು 25 ಲಕ್ಷ ರೂ.ಗಳ ಪರಿಹಾರವನ್ನು ಸರಕಾರದಿಂದಲೇ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

►►  ಅಧಿಕಾರಿಗಳ ಅಭಿಪ್ರಾಯ ಬದಿಗೊತ್ತಿದ್ದ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದಲೇ 25 ಲಕ್ಷ ರೂ. ಭರಿಸಬೇಕು ಎಂದು ಮುಖ್ಯಮಂತ್ರಿಯಾಗಿದ್ದ  ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಮಂಡನೆಯಾಗಿದ್ದ ಕಡತಕ್ಕೆ ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಅವರು ಮೌಖಿಕವಾಗಿ ತಿಳಿಸಿದ್ದರು ಎಂಬುದು ಆರ್ಟಿಐ ದಾಖಲೆಯಿಂದ ಗೊತ್ತಾಗಿದೆ.

ಇದಕ್ಕೆ ಮುಖ್ಯಮಂತ್ರಿಯ ಪರಿಹಾರ ನಿಧಿ ಶಾಖೆಯ ಅಧಿಕಾರಿಗಳು ‘ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ  ಕೋಮು ಗಲಭೆ, ಕಗ್ಗೊಲೆ ಮುಂತಾದ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಇಲ್ಲಿಯವರೆಗೂ ಪರಿಹಾರ ಒದಗಿಸಿರುವುದಿಲ್ಲ. ಇಂತಹ ಪ್ರಕರಣಗಳಿಗೆ ಪರಿಹಾರ ಒದಗಿಸಿದಲ್ಲಿ ಆರ್ಟಿಐ ಅಡಿ ಅಥವಾ ನ್ಯಾಯಾಲಯದಲ್ಲಿ ಪ್ರಶ್ನೆಗಳು ಉದ್ಭವವಾಗುವ ಸಾಧ್ಯತೆಗಳು ಇರುತ್ತವೆ,’ ಎಂದು ಮುಖ್ಯಮಂತ್ರಿ ಅವರನ್ನು ಎಚ್ಚರಿಸಿದ್ದರು.

 ಅಷ್ಟೇ ಅಲ್ಲದೇ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಕಡತ ಮಂಡಿಸಿದ್ದ ಪರಿಹಾರ ನಿಧಿ ಶಾಖೆಯ ಅಧಿಕಾರಿಗಳು ‘ಸಿಎಂಆರ್ಎಫ್ಅಡಿಯಲ್ಲಿ ಇಂತಹ ಪ್ರಕರಣಗಳಲ್ಲಿ ಪರಿಹಾರವನ್ನು ಈ ಹಿಂದೆ ನೀಡಿರುವುದಿಲ್ಲ. ಮುಖ್ಯಮಂತ್ರಿಯ ಪರಿಹಾರ ನಿಧಿಯಲ್ಲಿ ಕೊಲೆ ಮತ್ತು ಕ್ರಿಮಿನಲ್ಪ್ರಕರಣಗಳಾಗಿದ್ದು, ಮೃತರಾದ ಅವಲಂಬಿತ ಕುಟುಂಬಗಳಿಗೆ ಪರಿಹಾರ ನೀಡಲು ಅವಕಾಶವಿರುವುದಿಲ್ಲ,’ ಎಂದು ಟಿಪ್ಪಣಿಯಲ್ಲಿ ತಮ್ಮ ಅಭಿಪ್ರಾಯವನ್ನು ದಾಖಲಿಸಿರುವುದು ಕಡತದೊಳಗಿರುವ ಟಿಪ್ಪಣಿ ಹಾಳೆಯಿಂದ ತಿಳಿದುಬಂದಿದೆ.

►► ಮೊದಲು ಕೋವಿಡ್ ಹಣ ಬಳಕೆ
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ. ಹರ್ಷ ಕುಟುಂಬ ಸದಸ್ಯರಿಗೆ  ಮಂಜೂರಾಗಿತ್ತಾದರೂ, ಈ ಹಣವು ಜಿಲ್ಲಾಧಿಕಾರಿಯವರ ಮುಖ್ಯಮಂತ್ರಿ ಪರಿಹಾರ ನಿಧಿ ಬ್ಯಾಂಕ್ ಖಾತೆಗೆ ಜಮಾ ಆಗಿರಲಿಲ್ಲ ಎಂಬ ಸಂಗತಿ ತಿಳಿದು ಬಂದಿದೆ.  ಅಲ್ಲದೆ ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಯವರು 2022ರ ಮಾರ್ಚ್ 10ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದರು ಎಂದು ಗೊತ್ತಾಗಿದೆ.

ಹರ್ಷನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿ ಖಾತೆ (ಸಂಖ್ಯೆ; 38587794605)ಯಿಂದ 25 ಲಕ್ಷ ರೂ. ಪರಿಹಾರ ವಿತರಿಸಿ ಸ್ವೀಕೃತಿ ಪಡೆದು ಮುಖ್ಯಮಂತ್ರಿಯ ಪರಿಹಾರ ನಿಧಿ ಶಾಖೆಗೆ ಒಗಿಸಬೇಕು ಎಂದು ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಅವರು ಸೂಚಿಸಿದ್ದರು. ಆದರೆ ಈ ಪರಿಹಾರದ ಮೊತ್ತವು ಶಿವಮೊಗ್ಗ ಜಿಲ್ಲಾಧಿಕಾರಿಯವರ ಮುಖ್ಯಮಂತ್ರಿಯ ಪರಿಹಾರ ನಿಧಿ ಬ್ಯಾಂಕ್ ಖಾತೆಗೆ ಜಮಾ ಆಗಿರಲಿಲ್ಲ ಎಂಬುದು ಟಿಪ್ಪಣಿ ಹಾಳೆಯಿಂದ  ತಿಳಿದು ಬಂದಿದೆ.

‘ಮೃತರ ಕುಟುಂಬಕ್ಕೆ ತುರ್ತಾಗಿ ಪರಿಹಾರ ಹಣ ವಿತರಣೆ ಮಾಡಬೇಕಾಗಿರುವುದರಿಂದ ಕೋವಿಡ್ 19ರಡಿ ತಹಶೀಲ್ದಾರ್ ಶಿವಮೊಗ್ಗ ಇವರಲ್ಲಿ ಲಭ್ಯವಿರುವ ಅನುದಾನದಲ್ಲಿ ಮೃತ ಹರ್ಷ ಕುಟುಂಬ ವಾರಸುದಾರರಿಗೆ 25 ಲಕ್ಷ ರೂ. ಪರಿಹಾರ ವಿತರಿಸಬೇಕು. ಈ ಪರಿಹಾರ ಮೊತ್ತವು ಜಿಲ್ಲಾಧಿಕಾರಿಯವರ ಮುಖ್ಯಮಂತ್ರಿಯ ಪರಿಹಾರ ನಿಧಿ ಬ್ಯಾಂಕ್ ಖಾತೆಗೆ ಜಮಾ ಆದ ಕೂಡಲೇ ಈ ಮೊತ್ತವನ್ನು ಮರು ಹಂಚಿಕೆ ಮಾಡಬೇಕು,’ ಎಂದು ನಿರ್ದೇಶನ ನೀಡಲಾಗಿತ್ತು ಎಂಬುದು ಗೊತ್ತಾಗಿದೆ.
ಈ ಪ್ರಕ್ರಿಯೆ ಆದ ನಂತರ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 25 ಲಕ್ಷ ರೂ. ಅನುದಾನವು ಜಿಲ್ಲಾಧಿಕಾರಿಯ ಉಳಿತಾಯ ಖಾತೆಗೆ ಜಮಾ ಆಗಿದ್ದರಿಂದ 25 ಲಕ್ಷ ರೂ.ಗಳನ್ನು ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಬಿಡುಗಡೆ ಮಾಡಲು ಅನುಮೋದಿಸಲಾಗಿತ್ತು ಎಂಬುದು ತಿಳಿದು ಬಂದಿದೆ.

 ಕೆಲ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಬಿಚ್ಚುಗತ್ತಿ ಮಾರಮ್ಮ ದೇಗುಲದಲ್ಲಿ ನೀಡಿದ್ದ ಪ್ರಸಾದ ಸೇವನೆಯಿಂದ ಸಾವೀಗೀಡಾಗಿದ್ದ  ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ., ಮತ್ತು ಮಂಡ್ಯ ಜಿಲ್ಲೆಯಲ್ಲಿನ ನಾಲೆಯೊಂದಕ್ಕೆ  ಬಸ್ ಉರುಳಿದ್ದರಿಂದಾಗಿ ಮೃತಪಟ್ಟಿದ್ದವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ.ನಂತೆ ಪರಿಹಾರದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗಿತ್ತು. ಈ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು.

ಸಾರ್ವಜನಿಕರು, ಸಂಘ ಸಂಸ್ಥೆಗಳು, ನಿಗಮ, ಮಂಡಳಿಗಳು, ಕಾರ್ಪೊರೇಷನ್ಗಳು  ಮುಖ್ಯಮಂತ್ರಿಯ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿವೆ. ಈ ಹಣವನ್ನು ಸನ್ನಿವೇಶ, ಕುಟುಂಬದ ತೀವ್ರತೆ, ದುಡಿಯುವ ವ್ಯಕ್ತಿ ಮೃತಪಟ್ಟಲ್ಲಿ, ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದಲೇ ಭರಿಸಲಾಗುತ್ತಿದೆ. ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗೆ ಕನಿಷ್ಠ 10ರಿಂದ 25 ಲಕ್ಷ ರೂವರೆಗೂ ಪರಿಹಾರವನ್ನು ಇದೇ ನಿಧಿಯಿಂದಲೇ ನೀಡಲಾಗುತ್ತಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X