Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ...

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕೆಎಸ್ಸಾರ್ಟಿಸಿ ಇಲೆಕ್ಟ್ರಿಕ್ ಬಸ್; ಪ್ರತಿದಿನ 6 ಸರಕಾರಿ ಬಸ್‌ಗಳ ಸಂಚಾರ

23 May 2023 1:02 PM IST
share
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕೆಎಸ್ಸಾರ್ಟಿಸಿ ಇಲೆಕ್ಟ್ರಿಕ್ ಬಸ್; ಪ್ರತಿದಿನ 6 ಸರಕಾರಿ ಬಸ್‌ಗಳ ಸಂಚಾರ

ಚಿಕ್ಕಮಗಳೂರು, ಮೇ 22: ಬೆಂಗಳೂರು ಸಾರಿಗೆ ವ್ಯವಸ್ಥೆಗೆ ಸೀಮಿತವಾಗಿದ್ದ ಇಲೆಕ್ಟ್ರಿಕ್ ಬಸ್‌ಗಳು ಸದ್ಯ ಕಾಫಿನಾಡಿಗೂ ಲಗ್ಗೆ ಇಟ್ಟಿದ್ದು, ಮೇ 19ರಿಂದ ಬೆಂಗಳೂರು-ಚಿಕ್ಕಮಗಳೂರು ನಗರಗಳ ನಡುವೆ ಕೆಎಸ್ಸಾರ್ಟಿಸಿ ಸಂಸ್ಥೆಯ 6 ಇಲೆಕ್ಟ್ರಿಕ್ ಬಸ್‌ಗಳ ಸೇವೆ ಸದ್ದಿಲ್ಲದೆ ಆರಂಭವಾಗಿದೆ.

ಸರಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಬೆಂಗಳೂರಿಗೆ ಸೀಮಿತವಾಗಿ ಇಲೆಕ್ಟ್ರಿಕ್ ಬಸ್‌ಗಳನ್ನು ರಾಜ್ಯ ಸರಕಾರ ಈಗಾಗಲೇ ಪರಿಚಯಿಸಿದೆ. ಪ್ರಸಕ್ತ ರಾಜ್ಯ ಅಂತರ್ ಜಿಲ್ಲೆಗಳ ನಡುವೆಯೂ ಇಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಬೆಂಗಳೂರು-ಚಿಕ್ಕಮಗಳೂರು ನಗರಗಳ ನಡುವೆ 6 ಸರಕಾರಿ ಇಲೆಕ್ಟ್ರಿಕ್ ಸಾರಿಗೆ ಬಸ್‌ಗಳ ಸೇವೆಗೆ ಚಾಲನೆ ನೀಡಿದೆ. ಮೇ 19ರಿಂದ ಈ ಎರಡು ನಗರಗಳ ನಡುವೆ 6 ಇಲೆಕ್ಟ್ರಿಕ್ ಸಾರಿಗೆ ಬಸ್‌ಗಳು ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈ ಹಿಂದೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ 6 ವೋಲ್ವೋ ಬಸ್‌ಗಳು ಸಂಚಾರ ನಡೆಸುತ್ತಿದ್ದವು. ವೋಲ್ವೋ ಬಸ್‌ಗಳ ಬದಲಾಗಿ ಸದ್ಯ ‘ಇವಿ ಪವರ್ ಪ್ಲೇಸ್’ ಎಂಬ ಪರಿಸರ ಸ್ನೇಹಿ ಇಲೆಕ್ಟ್ರಿಕ್ ಬಸ್‌ಗಳು ಸಂಚಾರ ಆರಂಭಿಸಿವೆ. ಚಿಕ್ಕಮಗಳೂರು-ಬೆಂಗಳೂರು ಪ್ರಯಾಣಿಕರೊಂದಿಗೆ ಈ ಬಸ್‌ಗಳು ಹಾಸನ- ಬೇಲೂರು ಪ್ರಯಾಣಿಕರಿಗೂ ಸೇವೆ ಒದಗಿಸುತ್ತಿವೆ. ವೋಲ್ವೋ ಬಸ್‌ನಂತೆ ಅತ್ಯಾಕರ್ಷಕ ವಿನ್ಯಾಸವನ್ನು ಹೊಂದಿರುವ ಈ ಸರಕಾರಿ ಇಲೆಕ್ಟ್ರಿಕ್ ಬಸ್‌ಗಳು ಪ್ರಯಾಣಿಕರ ಸುಖಕರ ಪ್ರಯಾಣಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಹೊಂದಿವೆ. ಬೆಂಗಳೂರಿನಿಂದ ನಿತ್ಯ ಬೆಳಗ್ಗೆ 5ರಿಂದ ಸಂಚಾರ ಆರಂಭಿಸುವ 6 ಇಲೆಕ್ಟ್ರಿಕ್ ಬಸ್‌ಗಳು ರಾತ್ರಿ 12ಗಂಟೆಯವರೆಗೂ ಪ್ರಾಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು-ಚಿಕ್ಕಮಗಳೂರು ನಡುವೆ ಸಂಚಾರ ಸೇವೆ ನೀಡುತ್ತಿರುವ ಈ ಬಸ್‌ಗಳ ಬ್ಯಾಟರಿ ಚಾಚ್‌ರ್ ಗಾಗಿ ನಗರದ ಮೂಡಿಗೆರೆ ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ಡಿಪೋದ ಆವರಣದಲ್ಲಿ ಎರಡು ಚಾರ್ಜರ್ ಘಟಕಗಳನ್ನು ಸ್ಥಾಪಿಸಲಾಗಿದೆ.

ಏಕಕಾಲದಲ್ಲಿ ಎರಡು ಬಸ್‌ಗಳ ಬ್ಯಾಟರಿಯನ್ನು ಈ ಘಟಕಗಳು ಚಾರ್ಜ್ ಮಾಡಬಹುದಾಗಿದೆ. ಒಮ್ಮೆ ಬ್ಯಾಟರಿ ಚಾರ್ಜ್ ಮಾಡಲು ಎರಡು ಗಂಟೆಗಳ ಕಾಲಾವಕಾಶ ಬೇಕಾಗಿದ್ದು, ಒಮ್ಮೆ ಚಾರ್ಜ್ ಮಾಡಿದರೆ 300 ಕಿ.ಮೀ. ಸಾಗುವ ಸಾಮರ್ಥ್ಯವನ್ನು ಈ ಇಲೆಕ್ಟ್ರಿಕ್ ಬಸ್‌ಗಳು ಹೊಂದಿವೆ. ಹಾಗೆಯೇ ಹಾಸನ ಡಿಪೋದಲ್ಲೂ ಚಾರ್ಜರ್ ಯೂನಿಟ್ ಗಳನ್ನು ತೆರೆದಲ್ಲಿ ಮತ್ತಷ್ಟು ಅನುಕೂಲವಾಗಲಿದೆ ಎನ್ನುವುದು ಕೆಎಸ್ಸಾರ್ಟಿಸಿ ಸಿಬ್ಬಂದಿ ಅನಿಸಿಕೆಯಾಗಿದೆ. ಪ್ರಯಾಣಿಕರ ಸುಖಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ಬಸ್‌ಗಳಲ್ಲಿ ಎಸಿ, ಪುಶ್‌ಬ್ಯಾಕ್ ಸೀಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿ ದೆ. ಬಸ್‌ನ ಒಳಬದಿ ಮತ್ತು ಹಿಂಬದಿಯಲ್ಲಿ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದೆ. ಬಸ್‌ನಲ್ಲಿ ಎರಡು ಟಿವಿ ಸೇರಿದಂತೆ ಮೊಬೈಲ್ ಚಾರ್ಜರ್ ವ್ಯವಸ್ಥೆಯನ್ನು ಪ್ರತೀ ಆಸನದಲ್ಲಿ ಕಲ್ಪಿಸಲಾಗಿದೆ. ಶಬ್ಧರಹಿತವಾಗಿರುವ ಈ ಬಸ್‌ಗಳು ನಾನ್‌ಸ್ಟಾಪ್ ಪ್ರಯಾಣಕ್ಕೆ ಹೇಳಿ ಮಾಡಿಸಿದ ಬಸ್ ಆಗಿದೆ. ಪ್ರತೀ ಬಸ್ ತಲಾ 43 ಸೀಟ್‌ಗಳ ಸಾಮರ್ಥ್ಯ ಹೊಂದಿವೆ.

ಒಟ್ಟಾರೆ ವೋಲ್ವೋ ಬಸ್‌ಗೆ ಯಾವುದೇ ಸೌಲಭ್ಯ ಕಡಿಮೆ ಇಲ್ಲದಂತೆ ಇಲೆಕ್ಟ್ರಿಕ್ ಬಸ್ ಗಳನ್ನು ವಿನ್ಯಾಸಗೊಳಿಸಲಾಗಿದ್ದು, ಪ್ರಯಾಣಿಕರ ಹಾಗೂ ಸಾರ್ವಜನಿಕರು ಆಕರ್ಷಣೆಯಾಗುತ್ತಿವೆ. ಕಾಫಿನಾಡಿನಿಂದ ಬೆಂಗಳೂರಿಗೆ ಇಲೆಕ್ಟ್ರಿಕ್ ಬಸ್ ವ್ಯವಸ್ಥೆಯನ್ನು ಕಲ್ಪಿಸಿರುವುದು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಲ್ಲಿ ಸಂತೋಷವನ್ನುಂಟು ಮಾಡಿದೆ.

''ವೊಲ್ವೊ ಬಸ್‌ಗೆ ಹೋಲಿಸಿದರೆ ವೇಗದ ಮಿತಿ ಇಲೆಕ್ಟ್ರಿಕ್ ಬಸ್‌ಗಳಲ್ಲಿ ಕಡಿಮೆ ಇದೆ. 90 ಕಿ.ಮೀ. ವೇಗ ಮಿತಿಯನ್ನು ಹೊಂದಿದ್ದು, ಸಂಸ್ಥೆಯ ಬೇರೆ ಬಸ್‌ಗಳಿಗೆ ಹೋಲಿಸಿದಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು, ಚಿಕ್ಕಮಗಳೂರಿನಿಂದ ಬೆಂಗಳೂರು ತಲುಪುವುದು ಒಂದೂವರೆ ಗಂಟೆ ಕಾಲ ತಡವಾಗಲಿದೆ. ಇದನ್ನು ಹೊರತು ಪಡಿಸಿದಂತೆ ವೊಲ್ವೊ ಬಸ್‌ನಲ್ಲಿ ಪ್ರಯಾಣಿಸಿದಷ್ಟೇ ಉಲ್ಲಾಸವನ್ನು ಈ ಇಲೆಕ್ಟ್ರಿಕ್ ಬಸ್‌ಗಳಿಂದ ಸಿಗುತ್ತಿದೆ. ಪ್ರಯಾಣಿಕರಿಂದಲೂ ಈ ಬಸ್‌ಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ''

- ಮಹೇಂದ್ರಕುಮಾರ್, ಪ್ರಯಾಣಿಕ

share
Next Story
X