ಸುಳ್ಯ: ರಸ್ತೆ ಅಪಘಾತಕ್ಕೆ ಯುವಕ ಬಲಿ

ಸುಳ್ಯ, ಮೇ 23: ಕಾರು ಮತ್ತು ದ್ವಿಚಕ್ರ ವಾಹನವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂನಡ್ಕ ಸಮೀಪ ಇಂದು ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
ಮೃತರನ್ನು ಕುಕ್ಕಜಡ್ಕ ನಿವಾಸಿ ನವೀನ್ ಸಂಕೇಶ (31) ಎಂದು ಗುರುತಿಸಲಾಗಿದೆ. ಸುಳ್ಯದ ಖಾಸಗಿ ಹಣಕಾಸು ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ನವೀನ್ ತನ್ನ ಸ್ಕೂಟರ್ ನಲ್ಲಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಕಾರು ಢಿಕ್ಕಿ ಹೊಡೆದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ನವೀನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಹುಗುಜ್ಜಾಗಿದೆ.

Next Story





