Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ...

ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

''ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ'' ► ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ, ಡಿಸಿಎಂ ಸಭೆ

23 May 2023 4:09 PM IST
share
ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
''ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ'' ► ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ, ಡಿಸಿಎಂ ಸಭೆ

ಬೆಂಗಳೂರು, ಮೇ 23 ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

share
Next Story
X