ಶೃಂಗೇರಿ | ಭಾರೀ ಗಾಳಿ, ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ, ತಪ್ಪಿದ ಅನಾಹುತ

ಚಿಕ್ಕಮಗಳೂರು: ಶೃಂಗೇರಿ ಸುತ್ತಮುತ್ತ ಭಾರೀ ಗಾಳಿ, ಮಳೆ ಸುರಿದ ಪರಿಣಾಮ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಘಟನೆ ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು ತೋಟದ ಕೆಲಸಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯ ಪರಿಣಾಮ ಶೃಂಗೇರಿ -ಚಿಕ್ಕಮಗಳೂರು ರಸ್ತೆಯ ಸಂಚಾರ ಕೆಲ ಕಾಲ ಬಂದ್ ಆಗಿತ್ತು.

Next Story





