ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 'ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶವಿಲ್ಲ, ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ದೂರು ನೀಡಲು ಬರುವವರ ಜತೆ ಸ್ನೇಹದಿಂದ ವರ್ತಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆದರೆ ಸಂಬಂಧಪಟ್ಟ ಡಿಸಿಪಿ, ಎಸ್ಪಿ ಹೊಣೆಗಾರರು ಎಂದು ಎಚ್ಚರಿಕೆ ನೀಡಲಾಗಿದೆ' ಎಂದು ತಿಳಿಸಿದರು.
'ಕಾನೂನು ಕ್ರಮಕೈಗೊಳ್ಳುವಾಗ ಆ ಧರ್ಮ ಈ ಧರ್ಮ ಎನ್ನಬಾರದು. ಸರ್ವರನ್ನು ಸಮಾನರಾಗಿ ಕಾಣುವಂತೆ ಪೊಲೀಸರಿಗೆ ಸೂಚಿಸಿದ್ದೇವೆ' ಎಂದರು.
ಇದನ್ನೂ ಓದಿ... ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?: ಪೊಲೀಸರಿಗೆ ಡಿಸಿಎಂ ಡಿಕೆಶಿ ತರಾಟೆ
Next Story