ಯುಪಿಎಸ್ಸಿ ಫಲಿತಾಂಶ: ಶಿವಮೊಗ್ಗದ ಐ.ಎನ್.ಮೇಘನಾಗೆ 617ನೇ ರ‍್ಯಾಂಕ್

ಶಿವಮೊಗ್ಗ, ಮೇ.23: ಇಲ್ಲಿನ ಹಾಲ್ಕೊಳ ಬಡಾವಣೆಯ ನಿವಾಸಿ, ನಿವೃತ್ತ ಡಿಸಿಎಫ್ ಐ.ಎಂ.ನಾಗರಾಜ್ ಹಾಗೂ ಜಿ.ಜಿ.ನಮಿತಾ ದಂಪತಿ ಪುತ್ರಿ ಐ.ಎನ್.ಮೇಘನಾ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಫಲಿತಾಂಶ ಪ್ರಕಟಿಸಿದೆ. ಮೇಘನಾ ಅಖಿಲ ಭಾರತ ಮಟ್ಟದಲ್ಲಿ 617ನೇ ರ‍್ಯಾಂಕ್ ಪಡೆದಿದ್ದಾರೆ.
ಮೇಘನಾ ಕಳೆದ ಬಾರಿ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ್ದರೂ ಸಂದರ್ಶನದಲ್ಲಿ ತೇರ್ಗಡೆ ಆಗಿರಲಿಲ್ಲ. ಈಗ ಎರಡನೇ ಪ್ರಯತ್ನದಲ್ಲಿ ತೇರ್ಗಡೆ ಆಗಿದ್ದಾರೆ. ಮೇಘನಾ ಬೆಂಗಳೂರಿನ ವಿಜಯನಗರದ ಇನ್‌ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮೈಸೂರು ಜಿಲ್ಲೆ ಬಂಡೀಪುರ ಹಾಗೂ ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದು, ಶಿವಮೊಗ್ಗದ ಸಾಂದೀಪನಿ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಪಿಯುಸಿ ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಮುಗಿಸಿದ್ದಾರೆ.
Next Story





