ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಕೈದಿ ಅನುಮಾನಾಸ್ಪದ ಸಾವು

ಬೆಂಗಳೂರು, ಮೇ 23: ಕೇಂದ್ರ ಕಾರಗೃಹ ಪರಪ್ಪನ ಅಗ್ರಹಾರದ ಶೌಚಾಲಯದಲ್ಲಿ ಶೂ ಲೇಸ್‍ನಿಂದ ನೇಣು ಬಿಗಿದುಕೊಂಡುರೌಡಿ ಸುನೀಲ್ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಕಗ್ಗಲಿಪುರದಲ್ಲಿ ವಿನೋದ್ ಎಂಬಾತನ ಕೊಲೆ ಪ್ರಕರಣದಲ್ಲಿ ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಸುನೀಲ್, ಜೂನ್.2ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿತ್ತು. ಈ ನಡುವೆ ಆತ ಅನಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಅವರು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story





