ಮೈಸೂರು: ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ಮೃತ್ಯು

ಮೈಸೂರು,ಮೇ 23: ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.
ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ಲೋಹಿತ್(15), ಯತೀಶ್(13) ಮೃತಪಟ್ಟ ಬಾಲಕರು ಎಂದು ತಿಳಿದು ಬಂದಿದೆ.
ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





