Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಿಝ್ವಾನ್ ಅರ್ಶದ್, ಲಕ್ಷ್ಮಿ...

ರಿಝ್ವಾನ್ ಅರ್ಶದ್, ಲಕ್ಷ್ಮಿ ಹೆಬ್ಬಾಳ್ಕರ್, ವಿಜಯೇಂದ್ರ ಸಹಿತ 27 ಮಂದಿ ಸದಸ್ಯರ ಪ್ರಮಾಣ ವಚನ

''9 ಮಂದಿ ಶಾಸಕರಿಗೆ ಸ್ಪೀಕರ್ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ...''

23 May 2023 7:39 PM IST
share
ರಿಝ್ವಾನ್ ಅರ್ಶದ್, ಲಕ್ಷ್ಮಿ ಹೆಬ್ಬಾಳ್ಕರ್, ವಿಜಯೇಂದ್ರ ಸಹಿತ 27 ಮಂದಿ ಸದಸ್ಯರ ಪ್ರಮಾಣ ವಚನ
''9 ಮಂದಿ ಶಾಸಕರಿಗೆ ಸ್ಪೀಕರ್ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ...''

ಬೆಂಗಳೂರು, ಮೇ 23: ಹದಿನಾರನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ 224 ಮಂದಿ ಸದಸ್ಯರ ಪೈಕಿ 9 ಮಂದಿ ಶಾಸಕರನ್ನು ಹೊರತುಪಡಿಸಿ ಉಳಿದೆಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಂಗಳವಾರ ವಿಶೇಷ ಅಧಿವೇಶನದ ನೂತನ ಸದಸ್ಯರುಗಳ ಪ್ರಮಾಣ ವಚನ ಕಲಾಪ ನಡೆಯಿತು. ಮೊದಲ ದಿನವಾದ ನಿನ್ನೆ 181 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದರು. ಬಾಕಿ ಉಳಿದಿದ್ದ ಸದಸ್ಯರ ಪೈಕಿ 34 ಮಂದಿ ಸದಸ್ಯರು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಸದನ ಆರಂಭವಾಗುತ್ತಿದ್ದಂತೆ ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರು ಪ್ರಮಾಣ ವಚನ ಕಲಾಪವನ್ನು ಕೈಗೆತ್ತಿಕೊಂಡಿದ್ದು, ನಿನ್ನೆ ಪ್ರಮಾಣ ವಚನ ಸ್ವೀಕರಿಸದ ಸದಸ್ಯರನ್ನು ಒಬ್ಬೊಬ್ಬರಾಗಿ ಸ್ಪೀಕರ್ ಪೀಠದ ಬಳಿಗೆ ಬಂದು ಪ್ರಮಾಣ ವಚನ ಸ್ವೀಕರಿಸಿದರು.

ಶಾಸಕರಾಗಿ ಲಕ್ಷ್ಮಿ ಹೆಬ್ಬಾಳ್ಕರ್, ಮಹೇಶ್ ಟೆಂಗಿನಕಾಯಿ, ಮಂಜುಳಾ ಅರವಿಂದ ಲಿಂಬಾವಳಿ, ಎಂ.ವೈ ಪಾಟೀಲ್, ಎಸ್.ರಘು, ರವಿಕುಮಾರ್ ಗಣಿಗ, ರಿಝ್ವಾನ್ ಅರ್ಶದ್, ಸಂತೋಷ್ ಲಾಡ್, ಶರಣು ಸಲಗಾರ್, ಶಾಂತನಗೌಡ, ಎನ್.ಎಚ್.ಕೋನರೆಡ್ಡಿ, ಎಸ್.ಆರ್.ಶ್ರೀನಿವಾಸ್, ಡಿ.ಸುಧಾಕರ್, ವಿ.ಸುನಿಲ್ ಕುಮಾರ್, ಬಿ.ವೈ.ವಿಜಯೇಂದ್ರ, ಶಶಿಕಲಾ ಜೊಲ್ಲೆ ಸೇರಿದಂತೆ ಹಲವು ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಶ್ರೀರಾಮಚಂದ್ರನ ಹೆಸರಿನಲ್ಲಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್ ಜಗಜ್ಯೋತಿ ಬಸವಣ್ಣ, ಕೋನರೆಡ್ಡಿ ರೈತರ ಹೆಸರಿನಲ್ಲಿ, ಡಿ.ಸುಧಾಕರ್ ಹಿರಿಯೂರಿನ ತೇರು ಮಲ್ಲೇಶ್ವರಸ್ವಾಮಿ, ಜಿ.ಕೆ.ವೆಂಕಟಶಿವಾ ರೆಡ್ಡಿ ಶ್ರೀನಿವಾಸಪುರ ಕ್ಷೇತ್ರದ ಜನತೆ ಹೆಸರಿನಲ್ಲಿ, ಬಿ.ವೈ.ವಿಜಯೇಂದ್ರ ಹುಚ್ಚುರಾಯಸ್ವಾಮಿ ಹೆಸರಿನಲ್ಲಿ, ಉಡುಪಿಯ ಯಶಪಾಲ್ ಎ.ಸುವರ್ಣ ಗೋಮಾತೆ ಹಾಗೂ ಉಡುಪಿಯ ಶ್ರೀವಿಭೂದೇಶ ತೀರ್ಥ ಶ್ರೀಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅದೇ ರೀತಿಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಅಲ್ಲಮಪ್ರಭು ಪಾಟೀಲ್ ಅವರು ಶರಣ ಬಸವೇಶ್ವರನ ಹೆಸರಿನಲ್ಲಿ, ತರೀಕೆರೆ ಕ್ಷೇತ್ರದ ಜಿ.ಎಚ್.ಶ್ರೀನಿವಾಸ್ ಜಗನ್ಮಾತೆ ಹೆಸರಿನಲ್ಲಿ ಹಾಗೂ ಮದ್ದೂರು ಕ್ಷೇತ್ರದ ಉದಯ್ ಕೆ.ಎಂ ಅವರು ಕ್ಷೇತ್ರದ ಜನತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ವಿಶೇಷವಾಗಿತ್ತು.

ಚುನಾವಣೆಯಲ್ಲಿ ಅವಕಾಶವಿಲ್ಲ: ಸದಸ್ಯರ ಪ್ರಮಾಣ ವಚನದ ನಂತರ ಮಾತನಾಡಿದ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ, ‘9 ಮಂದಿ ಸದಸ್ಯರನ್ನು ಬಿಟ್ಟು ಉಳಿದೆಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸದ ಸದಸ್ಯರು ನಾಳೆ(ಮೇ 24) ನಡೆಯಲಿರುವ ನೂತನ ಸ್ಪೀಕರ್ ಆಯ್ಕೆ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೀಗಾಗಿ, ಉಳಿದ ಎಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಸದನವನ್ನು ನಾಳೆ(24) ಬೆಳಗ್ಗೆ 11ಗಂಟೆಗೆ ಸೇರುವಂತೆ ಮುಂದೂಡಿದರು.

ಸ್ಪೀಕರ್ ಕೊಠಡಿಯಲ್ಲಿ ಏಳು ಮಂದಿ ಪ್ರಮಾಣ: ಗಾಂಧಿ ನಗರ ಕ್ಷೇತ್ರ ದಿನೇಶ್ ಗುಂಡೂರಾವ್, ಸೊರಬ ಕ್ಷೇತ್ರ ಮಧು ಬಂಗಾರಪ್ಪ, ಗೋವಿಂದರಾಜನಗರ ಕ್ಷೇತ್ರ ಪ್ರಿಯಾ ಕೃಷ್ಣ, ರುದ್ರಪ್ಪ ಲಮಾಣಿ, ಶಿವಮೊಗ್ಗ ಗ್ರಾಮೀಣ ಕ್ಷೇತ್ರ ಶಾರದಾ ಪೂರ್ಯಾನಾಯ್ಕ್, ಕರೆಮ್ಮ ಹಾಗೂ ಗೋಕಾಕ್ ಕ್ಷೇತ್ರ ರಮೇಶ್ ಜಾರಕಿಹೊಳಿ ಅವರು ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

‘ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಿ.ಎನ್.ರವಿಕುಮಾರ್, ಎಚ್.ಟಿ.ಮಂಜು, ಸ್ವರೂಪ ಪ್ರಕಾಶ್, ಸಿ.ಬಿ.ಸುರೇಶ್ ಬಾಬು, ಕಾಂಗ್ರೆಸ್‍ನ ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ ಹಾಗೂ ಬಿಜೆಪಿಯ ಪ್ರಭು ಚೌಹಾಣ್ ಸೇರಿದಂತೆ ಇನ್ನೂ 9 ಮಂದಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಬೇಕಿದೆ’ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
Next Story
X