ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಬೈಂದೂರು: ಮದ್ಯಪಾನ ಸೇವಿಸುವ ಚಟ ಹೊಂದಿದ್ದ ಶಶಿಧರ ಆಚಾರಿ(32) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮೇ 21ರಂದು ರಾತ್ರಿ ವೇಳೆ ಶಿರೂರು ಗ್ರಾಮದ ಹಡವಿನಕೋಣೆ ಚಾಟಿನಗದ್ದೆ ಎಂಬಲ್ಲಿರುವ ಸಂಬಂಧಿಕರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ಐರೋಡಿ ನಿವಾಸಿ ದೇವದಾಸ್(49) ಎಂಬವರು ಮೇ 22ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಬೆನ್ನುನೋವಿನಿಂದ ಬಳಲುತ್ತಿದ್ದ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ರೋಡ್‌ನ ಶಾಂತದುರ್ಗ ದೇವಸ್ಥಾನದ ಬಳಿ ನಿವಾಸಿ ಲೀಲಾವತಿ (48) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ಮೇ 22ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story