ಕೊಡವೂರಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ, ಮೇ 23: ಜಿಲ್ಲಾ ಸಂಚಾರಿ ನೇತ್ರಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊಡವೂರು ಉಪಕೇಂದ್ರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ 173 ಮಂದಿಗೆಕಣ್ಣಿನ ತಪಾಸಣೆ ನಡೆಸಲಾಗಿದ್ದು, 47 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 18ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.
ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜೇಷ್ಮ, ಸಮುದಾಯ ಆರೋಗ್ಯ ಅಧಿಕಾರಿ ಮೈತ್ರಿ ಹಾಗೂ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Next Story





