Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ ಬಾಂಗ್ಲಾಗೆ 20 ಬ್ರಾಡ್‌ಗೇಜ್...

ಭಾರತದಿಂದ ಬಾಂಗ್ಲಾಗೆ 20 ಬ್ರಾಡ್‌ಗೇಜ್ ರೈಲು ಎಂಜಿನ್ ಹಸ್ತಾಂತರ

24 May 2023 9:02 AM IST
share
ಭಾರತದಿಂದ ಬಾಂಗ್ಲಾಗೆ 20 ಬ್ರಾಡ್‌ಗೇಜ್ ರೈಲು ಎಂಜಿನ್ ಹಸ್ತಾಂತರ

ಹೊಸದಿಲ್ಲಿ: ಬಾಂಗ್ಲಾದೇಶಕ್ಕೆ ಮಂಗಳವಾರ 20 ಬ್ರಾಡ್‌ಗೇಜ್ ಲೋಕೊಮೋಟಿವ್ ಹಸ್ತಾಂತರದ ಮೂಲಕ ಅಲ್ಲಿನ ಪ್ರಧಾನಿ ಶೇಖ್ ಹಸೀನಾ 2019ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನೀಡಲಾದ ಭರವಸೆಯನ್ನು ಭಾರತ ಈಡೇರಿಸಿದಂತಾಗಿದೆ. ಈ ಲೋಕೋಮೋಟಿವ್‌ಗಳನ್ನು ಪ್ರಯಾಣಿಕ ರೈಲು ಹಾಗೂ ಸರಕು ಸಾಗಾಣಿಕೆ ರೈಲುಗಳಿಗೂ ಬಳಸಬಹುದಾಗಿದೆ.

ಈ ಲೋಕೊ ಹಸ್ತಾಂತರಿಸಿ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, "ಬಾಂಗ್ಲಾದೇಶದ ಜತೆಗಿನ ಭಾರತದ ಸಂಬಂಧ ನಾಗರಿಕತೆ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಸ್ವರೂಪದ್ದು. ಉಭಯ ದೇಶಗಳ ಪ್ರಧಾನಿಗಳು ಸಾಮಾಜಿಕ, ಆರ್ಥಿಕ ಮತ್ತು ರಾಕೀಯ ವಯಲಗಳಾದ್ಯಂತ ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಗಡಿಪ್ರದೇಶದಾದ್ಯಂತ ರೈಲು ಸಂಪರ್ಕವನ್ನು ಸುಧಾರಿಸಲು ಮತ್ತು ಬಲಗೊಳಿಸಲು ಹಾಗೂ ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧವನ್ನು ಸುಧಾರಿಸಲು ಭಾರತೀಯ ರೈಲ್ವೆ ಪ್ರಮುಖ ಪಾತ್ರ ವಹಿಸುತ್ತಿದೆ" ಎಂದು ಬಣ್ಣಿಸಿದರು.

ಪ್ರಸ್ತುತ ಗೆಡಾ-ದರ್ಸಾನಾ, ಬೆನಪೋಲ್-ಪೆಟ್ರಾಪೋಲ್, ಸಿಂಗಾಬಾದ್- ರೋಹನ್‌ಪುರ, ರಾಧಿಕಾಪುರ- ಬಿರೋಲ್ ಹಾಗೂ ಹಲ್ದಿಬಾರಿ- ಚಿಲಾಹಾದಿ ನಡುವೆ ಐದು ಬ್ರಾಡ್‌ಗೇಜ್ ರೈಲುಗಳು ಕಾರ್ಯಾಚರಣೆ ನಡೆಸುತ್ತಿವೆ. ಉಭಯ ದೇಶಗಳ ನಡುವೆ ಸಂಪರ್ಕ ಕಲ್ಪಿಸುವ ಅಖೋರಾ- ಅತರ್ಗಲ ಮತ್ತು ಮಹಿಷಾಸನ- ಶಹಜಹಾನ್‌ಪುರ ನಡುವಿನ ಕಾಮಗಾರಿ ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದರು.

ಬಾಂಗ್ಲಾದೇಶದ ರೈಲ್ವೆ ಅಗತ್ಯತೆಗೆ ಅನುಸಾರವಾಗಿ ಈ ಲೋಕೊಮೋಟಿವ್‌ಗಳನ್ನು ಸೂಕ್ತವಾಗಿ ಆಧುನೀಕರಿಸಲಾಗಿದೆ.

share
Next Story
X