ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ ಕುಮಾರಸ್ವಾಮಿ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಅವಿರೋಧ ಆಯ್ಕೆ ಆಗಿದ್ದಾರೆ.
ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.
ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ತಮ್ಮ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಈ ಸಭೆಯಲ್ಲಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರೂ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್ ನ ಎಲ್ಲಾ ಸದಸ್ಯರು ಹಾಜರಿದ್ದರು.
Next Story





