ಸ್ಪೀಕರ್ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜೆಡಿಎಸ್ ಶಾಸಕರು

ಬೆಂಗಳೂರು: ಕಳೆದ 2 ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ಶಾಸಕರು ಬುಧವಾರ ಸ್ಪೀಕರ್ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಜೆಡಿಎಸ್ ಶಾಸಕರಾದ ಕುಮಾರಸ್ವಾಮಿ, ಎಚ್ಡಿ ರೇವಣ್ಣ, ಸ್ವರೂಪ್, ಶಾರದಾ ನಾಯಕ್, ಸಿ.ಬಿ.ಸುರೇಶ್ ಬಾಬು ಪ್ರಮಾಣವಚನ ಸ್ವೀಕರಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ
ಬುಧವಾರ ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಕುಮಾರಸ್ವಾಮಿ ಅವರು ಸೇರಿ ಪಕ್ಷದ ಎಲ್ಲ 19 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಹಾಜರಾಗಿದ್ದರು.
Next Story