ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಿಂದ ದೂರು

ಬೆಳ್ತಂಗಡಿ, ಮೇ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ಪೊಲೀಸ್ ದೂರು ನೀಡಿದೆ.
ಮೇ 22ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ಆಯೋಜಿತ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ, ಉಪಾಧ್ಯಕ್ಷೆ ಮಮತಾ , ಪ್ರಧಾನ ಕಾರ್ಯದರ್ಶಿ ಸುಮಂಗಲಾ ನಾಯ್ಕ್, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮ ಮಾಚಾರು ಉಪಸ್ಥಿತರಿದ್ದರು.
Next Story