Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಖ್ಯಾಬಲ ಇಲ್ಲವೆಂದು ಎದೆಗುಂದಬೇಡಿ:...

ಸಂಖ್ಯಾಬಲ ಇಲ್ಲವೆಂದು ಎದೆಗುಂದಬೇಡಿ: ನೂತನ JDS ಶಾಸಕರಿಗೆ ಧೈರ್ಯ ತುಂಬಿದ ಎಚ್.ಡಿ.ದೇವೇಗೌಡ

''ಲೋಕಸಭೆಯಲ್ಲೂ ಪಕ್ಷದ ಪರವಾಗಿ ನಾನು ಒಬ್ಬನೇ ಇದ್ದೆ...''

24 May 2023 6:45 PM IST
share
ಸಂಖ್ಯಾಬಲ ಇಲ್ಲವೆಂದು ಎದೆಗುಂದಬೇಡಿ: ನೂತನ JDS ಶಾಸಕರಿಗೆ ಧೈರ್ಯ ತುಂಬಿದ ಎಚ್.ಡಿ.ದೇವೇಗೌಡ
''ಲೋಕಸಭೆಯಲ್ಲೂ ಪಕ್ಷದ ಪರವಾಗಿ ನಾನು ಒಬ್ಬನೇ ಇದ್ದೆ...''

ಬೆಂಗಳೂರು: 'ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಸದಸ್ಯರಿದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ?' ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. 

ಬುಧವಾರ ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು, ''19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಅಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ'' ಎಂದು ನುಡಿದರು. 

'ನಾನು ಕೂಡ ಸೋತಿದ್ದೇನೆ, ಗೆದ್ದಿದ್ದೇನೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲಾ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದ್ದೇನೆ. 1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ, ಅಧೈರ್ಯಪಟ್ಟರೆ ಉಪಯೋಗವಿಲ್ಲ. ನಿಮ್ಮ ಜತೆ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ, ಹೋರಾಟ ಮಾಡಿ'' ಎಂದು ಧೈರ್ಯ ತುಂಬಿದರು. 

'ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ' ಎಂದು ಹೇಳಿದರು. 

ಇದೇ ವೇಳೆ ನೂತನ ಶಾಸಕರ ಜತೆ ಮಾತುಕತೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ''ಈ ಸರಕಾರ ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಆಗಲೇ ಅಧಿಕಾರಕ್ಕಾಗಿ ಕಿರಿಕಿರಿ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಅವರ ರಾಜಕೀಯ ಬೇಕಿಲ್ಲ. ಜನತೆಗೆ ಅವರು ಕೊಟ್ಟ ವಚನ ಪಾಲಿಸುವಂತೆ ಹೋರಾಟ ಮಾಡೋಣ'' ಎಂದರು.

ಸಿಎಂ ಇಬ್ರಾಹಿಂ, ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಹಾಜರಿದ್ದರು.

share
Next Story
X