ಸನ್ನಡತೆ ಆಧಾರದಲ್ಲಿ ರಾಜ್ಯದೆಲ್ಲೆಡೆ 214 ಕೈದಿಗಳ ಬಿಡುಗಡೆ

ಬೆಂಗಳೂರು, ಮೇ 23: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 81 ಮಂದಿ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 214 ಜನ ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.
ಇತ್ತೀಚಿಗೆ ಉತ್ತಮ ಸನ್ನಡತೆ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುವಂತೆ ಸ್ಥಾಯಿ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸರಕಾರದ ಆದೇಶದಂತೆ ಕೈದಿಗಳಿಂದ ಮತ್ತೆ ಅಪರಾಧ ಕೃತ್ಯದಲ್ಲಿ ಭಾಗಿಯಾಗುವುದಿಲ್ಲ, ಕೆಟ್ಟ ವ್ಯಕ್ತಿಗಳ ಜೊತೆ ಸೇರುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಪ್ರಮಾಣ ಪತ್ರ ನೀಡಿ ನಿನ್ನೆ ರಾತ್ರಿ ಬಿಡುಗಡೆಗೊಳಿಸಲಾಯಿತು.
Next Story





