ಬೆಂಗಳೂರಿನಲ್ಲಿ 5ನೇ ದಿನವೂ ಮುಂದುವರಿದ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು, ಮೇ 24: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮತ್ತೆ ಮಳೆರಾಯ ಅಬ್ಬರಿಸಿದ್ದು, ನಗರದ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ.
ಕಳೆದ ಐದು ದಿನಗಳಿಂದ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ನಗರದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಬುಧವಾರವೂ ಭಾರೀ ಮಳೆ ಸುರಿಯಿತು.
ಮಳೆಯಿಂದ ಯಶವಂತಪುರದ ತುಳಸಿನಗರ, ಹೊಸಹಳ್ಳಿ ಹೇರೋಹಳ್ಳಿ, ಅಂಜನಾನಗರ ಪ್ರಮುಖ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ಸುತ್ತಮುತ್ತಲಿನ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಮನೆಯಲ್ಲಿರುವ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಜನರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ತುಂಬಾ ನೀರು ನಿಂತುಕೊಂಡ ಪರಿಣಾಮ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಯಿತು.
ಸಂಚಾರ ದಟ್ಟಣೆ: ಮಳೆಯಿಂದ ಆನಂದರಾವ್ ವೃತ್ತ, ನೃಪತುಂಗ ರಸ್ತೆ, ಕೆ.ಆರ್.ರಸ್ತೆ, ಮೆಜೆಸ್ಟಿಕ್, ಮಲ್ಲೇಶ್ವರ, ಶಾಂತಿನಗರ, ಡಬ್ಬಲ್ ರಸ್ತೆ, ಲಾಲ್‍ಬಾಗ್ ರಸ್ತೆ ಸೇರಿ ನಗರದ ಹಲವು ಕಡೆ ಮಳೆ ನೀರು ನಿಂತುಕೊಂಡಿತ್ತು. ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುವುದಕ್ಕೆ ಸಿದ್ಧರಾಗಿದ್ದ ಸಾರ್ವಜನಿಕರು ಮಳೆಯಿಂದ ಉಂಟಾದ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿದರು.






.jpg)
.jpg)
.jpg)

