Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಉಳಿಸಿ, ಬದಲಾವಣೆ ತರಲು...

ಸಂವಿಧಾನ ಉಳಿಸಿ, ಬದಲಾವಣೆ ತರಲು ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

24 May 2023 9:30 PM IST
share
ಸಂವಿಧಾನ ಉಳಿಸಿ, ಬದಲಾವಣೆ ತರಲು ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬೆಂಗಳೂರು, ಮೇ 24: ಸಂವಿಧಾನವನ್ನು ಉಳಿಸಲು ಪತ್ರಿಕೋದ್ಯಮ ಮಹತ್ವದ ದಾರಿಯಾಗಿದ್ದು, ಸಮಾಜದಲ್ಲಿ ಜನಪರ ಬದಲಾವಣೆ ತರುವಲ್ಲಿ ಮಾಧ್ಯಮದ ಪಾತ್ರ ಬಹುಮುಖ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಪತ್ರಿಕೋದ್ಯಮ ನನ್ನ ಉಸಿರು. ಅದರಿಂದ ಅನೇಕ ಮೌಲ್ಯಗಳನ್ನು ಕಲಿತಿದ್ದೇನೆ. ಹಾಗಾಗಿ ನನಗೆ ಪತ್ರಿಕೋದ್ಯಮದ ಘನತೆಯ ಬಗ್ಗೆ ಎಚ್ಚರ ಮತ್ತು ಪ್ರೀತಿಯಿದೆ’ ಎಂದು ಹೇಳಿದರು.

‘ಪತ್ರಕರ್ತರು ತಮ್ಮ ವೃತ್ತಿಕ್ಷೇತ್ರದಲ್ಲಿ ಭಾರೀ ಸವಾಲನ್ನು ಎದುರಿಸುತ್ತಿದ್ದಾರೆ. ಏನೇ ಆದರೂ ಸದಾ ವೃತ್ತಿ ಬದ್ಧತೆ ಮೆರೆದರೆ ಮಾತ್ರ ಉತ್ತಮ ಪತ್ರಕರ್ತರಾಗಲು ಸಾಧ್ಯ ಎಂದ ಕೆ.ವಿ.ಪ್ರಭಾಕರ್, ಪತ್ರಿಕೋದ್ಯಮ ವೃತ್ತಿಯಲ್ಲಿ ಉತ್ತಮ ಮಾರ್ಗದರ್ಶನ ದೊರೆತರೆ ಸ್ಥಾನಮಾನಗಳು ಪತ್ರಕರ್ತರನ್ನು ಹುಡುಕಿಕೊಂಡು ಬರುತ್ತದೆ. ಸಂವಿಧಾನದ ಆಶಯದ ಅನುಗುಣಕ್ಕೆ ಪತ್ರಕರ್ತರು ನಡೆದುಕೊಳ್ಳುವುದನ್ನು ಕಲಿಯಬೇಕು ಎಂದು ಹೇಳಿದರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ‘ಪತ್ರಕರ್ತರಾಗಿ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಪರಿಶ್ರಮದಿಂದ ಮೇಲೇರಿ ಬಂದ ಪ್ರಭಾಕರ್, ಸಂಯಮದ ನಡವಳಿಕೆಯಿಂದ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು.

ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ಮಾತನಾಡಿ, ಅಧಿಕಾರದ ಹುದ್ದೆಯಲ್ಲಿದ್ದಾಗಲೂ ಪ್ರಭಾಕರ್ ಪತ್ರಕರ್ತರಾಗಿ ಉಳಿದಿದ್ದಾರೆ. ಅವರ ಪರಿಶ್ರಮ ಮತ್ತು ಸಮಚಿತ್ತದ ನಡೆ ಎತ್ತರಕ್ಕೆ ಬೆಳೆಸಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಕಂ.ಕ.ಮೂರ್ತಿ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಹಿರಿಯ ಪತ್ರಕರ್ತರಾದ ಗೋಪಿನಾಥ, ಚೆಲುವರಾಜು, ವೆಂಕಟಸಿಂಗ್, ಹರೀಶ್ ಡಿ.ಎಲ್., ರವಿನಾಕಲಗೂಡು, ಗಿರೀಶ್ ಕೋಟೆ, ಅರುಣಾ ಕುಣಿಗಲ್, ಗುರುರಾಜ ಹೂಗಾರ್, ಶಶಿಕಲಾ ಸೇರಿದಂತೆ ಹಲವರು ಇದ್ದರು.

share
Next Story
X